ಪುತ್ತೂರು : ಮನೆಮುಂದೆ ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

ಪುತ್ತೂರು: ಮಹಿಳೆಯೋರ್ವರ ಮೃತದೇಹವೊಂದು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಯೊಂದು ಇಂದು (ನ.26) ದೊರಕಿದೆ. ತಾಲೂಕಿನ ಕುಂಬ್ರ ಎಂಬಲ್ಲಿ ಈ ಘಟನೆ ನಡೆದಿದೆ.

ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆಯನ್ನು ನಬೀಸ ಎಂದು ಗುರುತಿಸಲಾಗಿದೆ. ಹಿಂದಿನ ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದ ನಬೀಸಾ, ಬೆಳಿಗ್ಗೆ ಮನೆಯ ಎದುರು ಭಾಗದಲ್ಲಿ ಇವರು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬೆಂಕಿ ಹಚ್ಚಿಕೊಂಡರೇ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿತ್ತೇ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ನಬೀಸ ಅವರು ಅಲ್ಪ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಪತಿ ಇಬ್ರಾಹಿಂ ಹಾಗೂ ಮಕ್ಕಳನ್ನು ಅಗಲಿದ್ದಾರೆ.

Leave A Reply

Your email address will not be published.