ʼತಪಸ್‌ – ಸಾಧನಾ’ ಉಚಿತ ಶಿಕ್ಷಣ ಯೋಜನೆ ಪ್ರವೇಶ ಪರೀಕ್ಷೆಗೆ ಬಡ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಬಡ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ರಾಷ್ಟ್ರೋತ್ಥಾನ ಪರಿಷತ್‌ ʼತಪಸ್‌ – ಸಾಧನಾʼ ಎಂಬ ಉಚಿತ ಶಿಕ್ಷಣ ಯೋಜನೆಯನ್ನು ಆರಂಭಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಈ ಯೋಜನೆಗಳ ಅಡಿಯಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ವಸತಿ ಸಹಿತ ಉಚಿತ ಪಿಯುಸಿ ಶಿಕ್ಷಣದೊಂದಿಗೆ ಐಐಟಿ, ಜೆಇಇ, ನೀಟ್‌ ಪರೀಕ್ಷೆಗಳಿಗೆ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ. ಗಂಡು ಮಕ್ಕಳಿಗೆ ಹಾಗೂ ಸಾಧನಾ ಯೋಜನೆಯ ಅಡಿಯಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣವನ್ನು ರಾಷ್ಟ್ರೋತ್ಥಾನ ಪರಿಷತ್‌ ವತಿಯಿಂದ ನೀಡಲಾಗುತ್ತದೆ.

ಈ ಕಲಿಕೆಗೆ ಸೇರಲಿಚ್ಛಿಸುವ ಅರ್ಹ ಬಡ ವಿದ್ಯಾರ್ಥಿಗಳಿಂದ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ 10 ನೇ ತರಗತಿ ಓದುತ್ತಿರುವ ಮಕ್ಕಳು ಅರ್ಜಿಸಲ್ಲಿಸಬಹುದಾಗಿದೆ. ಡಿಸೆಂಬರ್‌ 25ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು ಅರ್ಜಿಗಳನ್ನು ಡಿ.10ರ ಒಳಗಾಗಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ :
www.tapassaadhana.org
ದೂರವಾಣಿ ಸಂಖ್ಯೆ:
9481201144 / 9844602529 / 7975913828

Leave A Reply

Your email address will not be published.