ಮಹಿಳೆಯರಿಗೆ ‘ಸಿಎಂ ಬೊಮ್ಮಾಯಿ’ ಭರ್ಜರಿ ಗುಡ್ ನ್ಯೂಸ್ !
ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ವರ್ಷದಲ್ಲೇ ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೆ ತರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಿನ್ನೆ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಸಿಎಂ ಬೊಮ್ಮಾಯಿ ಮಾತನಾಡಿದರು.
ಈ ಯೋಜನೆ ಮೂಲಕ ಪ್ರತಿ ಗ್ರಾಮದಲ್ಲೂ ಎರಡು ಮಹಿಳಾ ಸಂಘಗಳಿಗೆ ಈ ಯೋಜನೆಯಡಿ 5 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುತ್ತದೆ, ಇದರಿಂದ ಮಹಿಳೆಯರ ಸಬಲೀಕರಣವಾಗಲಿದೆ, ಈ ಯೋಜನೆಯನ್ನು ಈ ವರ್ಷವೇ ಜಾರಿ ಮಾಡುತ್ತೇವೆ ಎಂದು ಹೇಳಿದರು. ಇನ್ನೂ, ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದ್ಯಾ ಎಂಬುದನ್ನು ಕಾದು ನೋಡಬೇಕಾಗಿದೆ. ಇದೇ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಮಹಿಳಾ ಆಯೋಗವನ್ನು ಬಲಪಡಿಸಬೇಕೆಂಬ ಬೇಡಿಕೆ ಕೇಳಿಬಂದಿದ್ದು, ನಾವು ನಿರ್ಭಯ ಕಾನೂನು ಜಾರಿಗೊಳಿಸಲು ಸಿದ್ಧರಾಗಿದ್ದೇವೆ. ಕಾನೂನಿನ ಬಗ್ಗೆ ಪುರುಷರಿಗೆ ಮಾಹಿತಿ ನೀಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನಾವು ಮುಂದಿನ ದಿನಗಳಲ್ಲಿ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು.
ಸ್ತ್ರೀ ಸಾಮರ್ಥ್ಯ ಯೋಜನೆಯಡಿ 33 ಸಾವಿರ ಸ್ತ್ರೀ ಶಕ್ತಿ ಸಂಘಗಳಿಗೆ 5 ಲಕ್ಷ ರೂ. ಆರ್ಥಿಕ ಸಹಾಯ, ತರಬೇತಿ ನೀಡಿ, ಸಂಘದಲ್ಲಿ ಉತ್ಪಾದನೆಯಾಗುವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಮೂಲಕ 5 ಲಕ್ಷ ಮಹಿಳೆಯರಿಗೆ ಉದ್ಯೋಗ ಕಲ್ಪಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಘೋಷಿಸಿದ್ದರು.