Ration Card : ಪಡಿತರ ಚೀಟಿದಾರರೇ ಗಮನಿಸಿ : ಈ ರೀತಿ ಮಾಡಿದರೆ ನಿಮ್ಮ ರೇಷನ್‌ ಕಾರ್ಡ್‌ ಅಮಾನತು ಗ್ಯಾರಂಟಿ

ಬಡತನ ರೇಖೆಗಿಂತ ಕೆಳಗಿರುವ ಜನರ ಜೀವನ ಬಹಳ ಕಷ್ಟಕರ ಆಗಿರುತ್ತದೆ ಮತ್ತು ಮೂಲಭೂತ ಸೌಕರ್ಯ ಪಡೆದುಕೊಳ್ಳುವಲ್ಲಿ ಆರ್ಥಿಕವಾಗಿ ಅಶಕ್ತರಾಗಿರುತ್ತಾರೆ. ಹಾಗಾಗಿ ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಮಾಡುತ್ತಿದೆ ಅದಲ್ಲದೆ ಕೆಲವು ಸೌಲಭ್ಯಗಳನ್ನು ನೀಡಿ ಬಡವರನ್ನು ಪ್ರೋತ್ಸಾಹಿಸುತ್ತಿದೆ. ಒಟ್ಟಿನಲ್ಲಿ ಸರ್ಕಾರವು ಜನತೆಯ ಏಳಿಗೆಗಾಗಿ ಶ್ರಮಿಸುತ್ತಲೇ ಇದೆ. ಬಡವರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಸರ್ಕಾರ ಹರ ಸಾಹಸ ಪಡುತ್ತಿದೆ.ಪ್ರಸ್ತುತ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿಯೊದನ್ನು ನೀಡಿದೆ.

 

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಸಿಗುವ ಆಹಾರ ಧಾನ್ಯಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಹಣಕ್ಕಾಗಿ ಮಾರಾಟ ಮಾಡುವ ಮಾಹಿತಿ ದೊರಕಿದಲ್ಲಿ 6 ತಿಂಗಳು ಕಾರ್ಡ್ ಅಮಾನತು ಆಗಲಿದೆ ಎಂದು ಆದೇಶ ಹೊರಡಿಸಲಾಗಿದೆ.

ಅನ್ಯಭಾಗ್ಯ ಯೋಜನೆಯಡಿ ಸಿಗುವ ಆಹಾರ ಧಾನ್ಯಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಹಣಕ್ಕಾಗಿ ಮಾರಾಟ ಮಾಡುವ ಫಲಾನುಭವಿಗಳ ಪಡಿತರ ಚೀಟಿ ಆರು ತಿಂಗಳು ಅಮಾನತು ಆಗಲಿದೆ. ಜೊತೆಗೆ ಮಾರುಕಟ್ಟೆ ದರದಲ್ಲಿ ಅಕ್ಕಿಯನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುವುದು ಎಂದು ಆಹಾರ ಇಲಾಖೆ ಆದೇಶ ನೀಡಿದೆ.

ಸದ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದು, ಅಕ್ರಮವಾಗಿ ಪಡಿತರ ಆಹಾರ ಧಾನ್ಯ ಮಾರಾಟ ನಿಯಂತ್ರಿಸುವ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಈ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂದು ಸರ್ಕಾರದ ನಿಲುವನ್ನು ತಿಳಿಸಿದೆ.

Leave A Reply

Your email address will not be published.