ಭಾರತ್ ಜೋಡೋ ಯಾತ್ರೆಯಲ್ಲಿ ಬಿದ್ದು ಕೈ ಮುರಿದುಕೊಂಡ ಕೆ.ಸಿ ವೇಣುಗೋಪಾಲ್
ಇಂದೋರ್ : ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಕೆಳಗೆ ಬಿದ್ದು ಕೈ ಮುರಿದುಕೊಂಡಿದ್ದಾರೆ.
ಮಧ್ಯಪ್ರದೇಶದ ಇಂದೋರ್ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ಜನರನ್ನು ನಿಯಂತ್ರಿಸುವಲ್ಲಿ ಪೊಲೀಸ್ ಸಿಬ್ಬಂದಿಗಳು ವಿಫಲವಾಗಿದ್ದು, ವೇಣುಗೋಪಾಲ್ರನ್ನು ತಳ್ಳಿಕೊಂಡು ಅಭಿಮಾನಿಗಳು ನುಗ್ಗಿದ್ದಾರೆ. ಕೆಳಕ್ಕೆ ಬಿದ್ದ ವೇಣುಗೋಪಾಲ್ ಮೊಣಕಾಲು ಮತ್ತು ಕೈಗೆ ಕಾಲ್ತುಳಿತದಿಂದ ಗಾಯವಾಗಿದೆ. ಬಳಿಕ ವೈದ್ಯರು ಪರೀಕ್ಷಿಸಿದಾಗ ಕೈ ಮೂಳೆ ಫ್ಯಾಕ್ಚರ್ ಆಗಿರುವ ಬಗ್ಗೆ ತಿಳಿದುಬಂದಿದೆ.ಕೂಡಲೇ ವೈದ್ಯರ ತಂಡ ನಿಗಾ ವಹಿಸಿದ್ದು, ಚಿಕಿತ್ಸೆ ನೀಡಿದೆ.
ಕೆ.ಸಿ ವೇಣುಗೋಪಾಲ್ ಬಿಜೆಪಿ ವಿರುದ್ಧ ಕಿಡಿಕಾರಿದ್ದರು. ಬಿಜೆಪಿ ದೇಶದಲ್ಲಿ ಸುಳ್ಳು ರಾಜಕಾರಣ ಮಾಡುತ್ತಿದೆ. ನಮ್ಮ ನಾಯಕ ರಾಹುಲ್ ಗಾಂಧಿ ವಿರುದ್ಧ ಅಪಪ್ರಚಾರ ಮಾಡಿ ಅವರ ವರ್ಚಸ್ಸನ್ನು ಹಾಳು ಮಾಡಿತ್ತು. ಇದೀಗ ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಏನೆಂದು ತೋರಿಸಿಕೊಟ್ಟಿದ್ದಾರೆ ಎಂದಿದ್ದರು