ಗಡಿಯಲ್ಲಿ ಮಹಾರಾಷ್ಟ್ರದ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿದ ಎಡಿಜಿಪಿ ಅಲೋಕ್‌ ಕುಮಾರ್‌

ಚಿಕೋಡಿ: ನಾಳೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗಡಿಯಲ್ಲಿ ಕರ್ನಾಟಕ ಪೊಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ತ್‌ ಕಲ್ಪಿಸಲಾಗಿದೆ‌.ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಕುಗನೊಳ್ಳಿ ಚೆಕ್‌ಪೋಸ್ಟ್‌ಗೆ ಎಡಿಜಿಪಿ‌ ಅಲೋಕ್‌ ಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಡಿಯಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ ಅಲೋಕ್‌ ಕುಮಾರ್‌ ಮಹಾರಾಷ್ಟ್ರದಿಂದ ಬರುವ ಬಸ್, ಕಾರು, ಹಾಗೂ ಲಾರಿ ಮೂಲಕ ಬಂದ ಪ್ರಯಾಣಿಕರಿಗೆ ಗಡಿಯಲ್ಲಿ ಗುಲಾಬಿ ಹೂ ನೀಡಿ ಸ್ವಾಗತಿಸಿದರು. ‌ಮಹಾರಾಷ್ಟ್ರದ ಕೆಲ‌ ಕಿಡಿಗೇಡಿಗಳು ನಮ್ಮ ಬಸ್‌ಗಳಿಗೆ ಮಸಿ ಬಳಿಯುವದು, ಕಲ್ಲು ಎಸೆಯುವದು ಮಾಡುತ್ತಿದ್ದಾರೆ. ಆದರೆ ಕನ್ನಡಿಗರು ಮಹಾರಾಷ್ಟ್ರದ ಜನರಿಗೆ ಗುಲಾಬಿ ಹೂ ನೀಡಿ ಸ್ವಾಗತಿಸುತ್ತಿದ್ದಾರೆ ಎನ್ನುವ ಸಾಮರಸ್ಯದ ಸಂದೇಶವನ್ನ ಕರ್ನಾಟಕ‌ ಪೊಲೀಸರು ಸಾರಿದರು.

 

Leave A Reply

Your email address will not be published.