BEL RECRUITEMT 2022 | ಒಟ್ಟು ಹುದ್ದೆ-260, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ-ಡಿ.14
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಉದ್ಯೋಗವಕಾಶವಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ಹೆಸರು : ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್
ಹುದ್ದೆ ಸಂಖ್ಯೆ : 260
ವಿದ್ಯಾರ್ಹತೆ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯೋಮಿತಿ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ನವೆಂಬರ್ 1,2022ರ ಅನ್ವಯ ಗರಿಷ್ಟ 28 ವರ್ಷ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 32 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವೇತನ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 55,000/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಅರ್ಜಿ ಶುಲ್ಕ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 400/-ರೂ ಮತ್ತು ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
ಅರ್ಜಿ ಸಲ್ಲಿಕೆ :
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ನಲ್ಲಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ನ.29
ಕೊನೆಯ ದಿನಾಂಕ : ಡಿಸೆಂಬರ್ 14
ಅಧಿಕೃತ ವೆಬ್ ಸೈಟ್ : https://bel-india.in/