BREAKING NEWS: ಪಿಎಫ್ಐ ನಿಷೇಧವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್: ರಿಟ್ ಅರ್ಜಿ ವಜಾ

ಪಾಪುಲರ್ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ನಿಷೇಧಿಸಿ ಕೇಂದ್ರ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎನ್ನುವ ಆರೋಪದ ಮೇಲೆ ಪಾಪ್ಯುಲರ್‌ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಸಪ್ಟೆಂಬರ್ 28ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನು ಪ್ರಶ್ನಿಸಿ ನಾಸಿರ್ ಅಲಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಪರ ವಾದ ಮಂಡಿಸಿದ ವಕೀಲ ಜಯಕುಮಾರ್ ಎಸ್.ಪಾಟೀಲ್ ಪಿಎಫ್ಐ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. ಆದರೆ ಪಿಎಫ್ಐ ಕಾನೂನು ಬಾಹಿರ ಸಂಘಟನೆ ಎನ್ನಲು ಕಾರಣ ಸ್ಪಷ್ಟಪಡಿಸಿಲ್ಲ. ಈ ತಕ್ಷಣದ ಬ್ಯಾನ್​ಗೆ ಪ್ರತ್ಯೇಕ ಕಾರಣ ನೀಡಬೇಕಾಗಿದ್ದು, ವಾದ ಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ ಎಂದು ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಆದೇಶ ಹೊರಡಿಸಲಾಗಿದೆ ಎಂದು ವಾದ ಮಂಡಿಸಿದ್ದರು.


ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು “ಪಿಎಫ್‌ಐ ಸಂಘಟನೆ ದೇಶ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದುಜ್ ಭಯೋತ್ಪಾದಕ ಸಂಘಟನೆಗಳ ಜೊತೆಗೂಡಿ ದೇಶದಲ್ಲಿ ಹಿಂಸಾತ್ಮಕ ಚಟುವಟಿಕೆಗಳನ್ನು ನಡೆಸಲು ಪ್ರೇರೇಪಿಸಿದೆ ಅಲ್ಲದೆ ಸಂಘಟನೆಯ ಸದಸ್ಯರು ರಾಷ್ಟ್ರದಲ್ಲಿ ಭೀತಿಯ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ” ಎಂದು ಸಮರ್ಥನೆ ನೀಡಿದ್ದಾರೆ .


ಪಿಎಫ್ಐ ನಿಷೇಧದ ಆದೇಶವನ್ನು ಪ್ರಶ್ನಿಸಿ ‌ಪಿಎಫ್ಐ ಮುಖಂಡ ನಾಸಿರ್ ಅಲಿ‌ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಮಾಡಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರಕ್ಕೆ ತೀರ್ಪನ್ನು ಕಾಯ್ದಿರಿಸಿತ್ತು. ಈ ಕುರಿತಾದ ತೀರ್ಪನ್ನು ಪ್ರಕಟಿಸಿದ್ದು, ಇಂದು ಪಿಎಫ್ಐ ನಿಷೇಧದ ಅರ್ಜಿಯನ್ನು ವಜಾಗೊಳಿಸಿದ್ದು, ಕೇಂದ್ರದ ತೀರ್ಪನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

Leave A Reply

Your email address will not be published.