ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ | ಹೀಗೆ ಅಪ್ಲೈ ಮಾಡಿ!
ಸರ್ಕಾರವು ಬಡವರಿಗಾಗಿ ಹಲವರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಹಾಗೆಯೇ ಬಡ ಮಕ್ಕಳ ಶೈಕ್ಷಣಿಕ ಮಟ್ಟದ ಬೆಳವಣಿಗೆಗಾಗಿ ಸರ್ಕಾರವು ಕೆಲವೊಂದು ರೀತಿಯ ವಿದ್ಯಾರ್ಥಿ ವೇತನಗಳನ್ನು ನೀಡಲು ನಿರ್ಧರಿಸಿದೆ. ಪ್ರಸ್ತುತ ವಿಜಯಪುರ ಜಿಲ್ಲೆಯ ಬಡ ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ಬಡ ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಸಾಕಷ್ಟು ಜನ ಬಡ ನೇಕಾರ ಕುಟುಂಬಗಳಿದ್ದು, ಅವರ ಮಕ್ಕಳು ಈ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವಿಜಯಪುರ ಜಿಲ್ಲೆಯ ಕೈಮಗ್ಗ ಗಣತಿ/ನೇಕಾರ ಸಮ್ಮಾನದಡಿ ಮತ್ತು ವಿದ್ಯುತ್ ಮಗ್ಗ ನೇಕಾರರ ಗಣತಿಯಲ್ಲಿ ಗುರುತಿಸಿರುವ ಎಲ್ಲಾ ನೇಕಾರರು ತಮ್ಮ ಮಕ್ಕಳ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ಇತರೆ ಸೌಲಭ್ಯಗಳ ಕುರಿತು ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕ ಸೇವಾಸಿಂಧು ತಂತ್ರಾಂಶದಲ್ಲಿ ಡಿಸೆಂಬರ್ ತಿಂಗಳ ದಿನಾಂಕ 10 ರೊಳಗೆ ಅರ್ಜಿ ಸಲ್ಲಿಸಬೇಕಾಗಿ ಮಾಹಿತಿ ನೀಡಲಾಗಿದೆ.
ಈ ಮೇಲಿನ ವಿದ್ಯಾರ್ಥಿ ವೇತನಕ್ಕೆ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08352-251268 ಅಥವಾ 9902561441 ಸಂಪರ್ಕಿಸಬಹುದಾಗಿದೆ. ಅದಲ್ಲದೆ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಶಿಕಾರಖಾನಾ, ಸ್ಟೇಷನ್ ಬ್ಯಾಕ್ ರೋಡ್, ವಿಜಯಪುರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿದಾರರಿಗೆ ವಯಸ್ಸಿನ ಯಾವುದೇ ಮಿತಿ ಇರುವುದಿಲ್ಲ. ಅರ್ಜಿ ಅಲ್ಲಿಸುವವರು ಸೂಕ್ತ ದಾಖಲೆಗಳ ಮೂಲಕ ಅರ್ಜಿಯನ್ನ ಸಲ್ಲಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಅರ್ಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನ ಪಡೆಯಬಹುದಾಗಿದೆ.