ಪ್ರತೇಕ ಮುಸ್ಲಿಂ ಕಾಲೇಜು ಸ್ಥಾಪನೆ ವಿಚಾರಕ್ಕೆ ಬಿಗ್‌ ಟ್ವಿಸ್ಟ್‌ – ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಶಫಿ ಸಅದಿ ಅವರು ರಾಜ್ಯದ 10 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಆರಂಭಿಸಲು ಉದ್ದೇಶಿಸಿರುವ ಕುರಿತು ಪ್ರಸ್ತಾಪಿಸಿದ್ದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರಾಸಗಟಾಗಿ ತಿರಸ್ಕಾರಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಕ್ಫ್​ ಮಂಡಳಿಯು 10 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಆರಂಭಿಸಲು ಉದ್ದೇಶಿಸಿರುವ ಕುರಿತು ಪ್ರಸ್ತಾಪಿಸಿದ ವಿಚಾರವನ್ನು ಸಾರಾಸಗಟಾಗಿ ಅಲ್ಲಗಳೆದಿದ್ದು, ಎರಡು ಬಣ ಗಳ ನಡುವೆ ಕಿತ್ತಾಟ ನಡೆಯುವುದನ್ನು ನಿಲ್ಲಿಸಿದ್ದಾರೆ.

ವಕ್ಫ್ ಮಂಡಳಿಯು ಮಹಿಳಾ ಕಾಲೇಜು ಶುರು ಮಾಡುವ ಕುರಿತು ಯಾವುದೇ ಪ್ರಸ್ತಾಪ ನಡೆಸಿಲ್ಲ ಅದರ ಜೊತೆಗೆ ಮುಖ್ಯವಾಗಿ ನನ್ನೊಂದಿಗೆ ಆಗಲಿ ಅಥವಾ ನಮ್ಮ ಸರ್ಕಾರದ ಯಾವುದೇ ಹಂತದಲ್ಲಿಯಾಗಲೀ ಈ ಬಗ್ಗೆ ಚರ್ಚೆಯಾಗಿಲ್ಲ’ ಎಂಬುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.


ವಕ್ಫ್​ ಮಂಡಳಿಯ ಅಧ್ಯಕ್ಷರು ಹೇಳಿರುವ ಕುರಿತಾಗಿ ತನಗೆ ಮಾಹಿತಿ ಇಲ್ಲ. ಅದು ಅವರ ವೈಯಕ್ತಿಕ ದೃಷ್ಟಿಕೋನವಾಗಿರ ಬಹುದು ಇಲ್ಲವೇ ಸ್ವಂತ ನಿಲುವಾದ ಮಾತ್ರಕ್ಕೆ ಅದನ್ನು ಸರ್ಕಾರದ ನಿಲುವು ಎನ್ನಲು ಸಾಧ್ಯವಿಲ್ಲ. ವಕ್ಫ್ ಮಂಡಳಿಯ ಅಧ್ಯಕ್ಷರು ಅವರ ನಿಲುವುಗಳ ಕುರಿತಾಗಿ ತನ್ನೊಂದಿಗೆ ಚರ್ಚೆ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಕ್ಫ್ ಮಂಡಳಿ ಅಧ್ಯಕ್ಷರ ಹೇಳಿಕೆಯು ವಿವಾದದ ಸ್ವರೂಪ ಪಡೆದುಕೊಂಡ ನಂತರ ಮುಖ್ಯಮಂತ್ರಿ ಸ್ಪಷ್ಟನೆ ನೀಡಿದ ಬಳಿಕ ‘ಟಿವಿ9′ ಪ್ರತಿಕ್ರಿಯೆ ನೀಡಿದ್ದು, ಹಜ್ ಮತ್ತು ವಕ್ಫ್​ ಖಾತೆ ಸಚಿವೆ ಶಶಿಕಲಾ ಜೊಲ್ಲೆ, ‘ಮುಸ್ಲಿಂ ಹೆಣ್ಣುಮಕ್ಕಳಿಗೆ ವಿಶೇಷ ಕಾಲೇಜು ತೆರೆಯುವ ಬಗ್ಗೆ ತಾನು ಯಾವುದೇ ಭರವಸೆ ನೀಡಿಲ್ಲ ಅಲ್ಲದೆ, ವಕ್ಫ್ ಮಂಡಳಿಯು ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಹಲವು ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸುತ್ತಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ,ಮುಂದಿನ ದಿನಗಳಲ್ಲಿ ವಕ್ಫ್ ಮಂಡಳಿಯು ಒಂದು ನಿರ್ದಿಷ್ಟ ಸಮುದಾಯಕ್ಕಾಗಿ ಶಿಕ್ಷಣ ಸಂಸ್ಥೆ ಆರಂಭಿಸುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ’ ಎಂದು ಹೇಳುವ ಮೂಲಕ ಆರೋಪವನ್ನು ತಳ್ಳಿಹಾಕಿದ್ದು, ಅಲ್ಲದೆ,ಪ್ರತ್ಯೇಕ ಸರಕಾರದ ಬೆಂಬಲವಿಲ್ಲ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ .

ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ಬಳಿಕ ,ವಕ್ಫ್​ ಮಂಡಳಿ ಅಧ್ಯಕ್ಷ ಶಫಿ ಸಅದಿ, ‘ಸರ್ಕಾರದ ಅನುದಾನದಿಂದ ಕಾಲೇಜು ಆರಂಭಿಸಲಾಗುತ್ತದೆ ಅಲ್ಲದೆ, ಇದರಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಮಾತ್ರವೇ ಅವಕಾಶ ಇರುತ್ತದೆ ಎಂದು ತಾನು ಎಲ್ಲಿಯೂ ಹೇಳಿಲ್ಲ ಎಂದಿದ್ದು, ಆದರೆ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಕಾಲೇಜು ಆರಂಭಿಸುವ ಕುರಿತು ನಾನು ಮಾತನಾಡಿರುವುದಾಗಿ ಹೇಳಿದ್ದಾರೆ. ನಮ್ಮ ಮಂಡಳಿಯಲ್ಲಿ ₹ 25 ಕೋಟಿಯಷ್ಟು ಹಣವಿದ್ದು, ಒಂದು ಕಾಲೇಜಿಗೆ ₹ 2.5 ಕೋಟಿ ಹಣ ನೀಡಿ ರಾಜ್ಯದ 10 ಜಿಲ್ಲೆಗಳಲ್ಲಿ ಕಾಲೇಜು ಆರಂಭಿಸಲಿದ್ದೇವೆ .

ಈ ಬಗ್ಗೆ ಸಚಿವರೊಂದಿಗೂ ಚರ್ಚಿಸಿರುವ ಬಗ್ಗೆ ಮಾತ್ರ ಹೇಳಿಕೆ ನೀಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಗೆ ತನ್ನ ಪೂರ್ಣ ಹೇಳಿಕೆಯನ್ನು ಮಾಧ್ಯಮಗಳು ಪ್ರಸಾರ ಮಾಡಿಲ್ಲ , ಕೇವಲ ಮುಸ್ಲಿಂ ಮಹಿಳೆಯರಿಗೆ ಮಾತ್ರವೇ ಕಾಲೇಜು ಆರಂಭಿಸುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಹೇಳಿದ್ದು, ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚುತ್ತಿವೆ ಎಂದಿದ್ದಾರೆ.

ವಕ್ಫ್ ಮಂಡಳಿಯಿಂದ ಈಗಾಗಲೇ 112 ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಇವು ಸರ್ಕಾರದ ಶಿಕ್ಷಣ ಇಲಾಖೆಯ ನಿಯಮಗಳ ಪ್ರಕಾರವೇ ಕೆಲಸ ಮಾಡುತ್ತಿವೆ. ಪ್ರಸ್ತಾಪಿತ ಕಾಲೇಜುಗಳು ಸಹ ಇದೇ ಮಾದರಿಯಲ್ಲಿ ಕೆಲಸ ಮಾಡುತ್ತವೆ. ಪ್ರಸ್ತಾಪಿತ ಕಾಲೇಜುಗಳಿಗೂ ಹಿಜಾಬ್ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ. ಇದರ ಕುರಿತಾಗಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರೊಂದಿಗೂ ನಾನು ಚರ್ಚಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯ ಆಶಯಕ್ಕೆ ತಕ್ಕಂತೆ ಈ ಯೋಜನೆಗಳಿವೆ’ ಎಂದು ಹೇಳಿಕೆ ನೀಡಿದ್ದಾರೆ.

.

Leave A Reply

Your email address will not be published.