KPSC : ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳ ಫಲಿತಾಂಶ

ಕರ್ನಾಟಕ ಲೋಕಸೇವಾ ಆಯೋಗವು ಇದೀಗ ವಿವಿಧ ಗ್ರೂಪ್‌ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಇದೀಗ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.

ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ ವಿವಿಧ ಸಾಲಿನ ವಿವಿಧ ಇಲಾಖೆಯ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹತಾ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು,ಆ ಹುದ್ದೆಗಳ ಕುರಿತ ಮಾಹಿತಿ ಇಲ್ಲಿದೆ ಮೂಲ ದಾಖಲೆಗಳ ಪರಿಶೀಲನೆಗೆ ಬಿಡುಗಡೆಯಾದ ಅರ್ಹತಾ ಪಟ್ಟಿಗಳು ಹೀಗಿದ್ದು,

*ಬಿಬಿಎಂಪಿ ಮಹಿಳಾ ವೈದ್ಯಾಧಿಕಾರಿ.

*ಬಿಲ್ ಕಲೆಕ್ಟರ್.

* 2016ನೇ ಸಾಲಿನ ಟೈಪಿಸ್ಟ್‌ ಹುದ್ದೆಗೆ 1:3 ಅರ್ಹತಾ ಪಟ್ಟಿ.

*ಹೌಸ್ ಫಾದರ್ ಮತ್ತು ಹೌಸ್ ಮದರ್

*ಗ್ರಂಥಾಲಯ ಸಹಾಯಕರು.

*ಜೂನಿಯರ್ ಅಕೌಂಟ್ ಅಸಿಸ್ಟಂಟ್.

*ಎನುಮರೇಟರ್ ಕಮ್ ಡಾಟಾ ಎಂಟ್ರಿ ಆಪರೇಟರ್.

ಈ ಮೇಲೆ ತಿಳಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ವಿವಿಧ ಸಾಲಿನ ವಿವಿಧ ಇಲಾಖೆಗಳ ಅಭ್ಯರ್ಥಿಗಳು, ಕೆಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಹತಾ ಪಟ್ಟಿಗಳನ್ನು ಪರಿಶೀಲನೆ ನಡೆಸಬಹುದು.

ಅರ್ಹತಾ ಪಟ್ಟಿಯಲ್ಲಿ ನಮೂದಾಗಿರುವ ಹೆಸರಿನ ಅಭ್ಯರ್ಥಿಗಳು ಮೂಲ ದಾಖಲೆಗಳನ್ನು ಪರಿಶೀಲನೆ ವೇಳೆ ಹಾಜರು ಮಾಡಬೇಕಾಗುತ್ತದೆ. ಅರ್ಹತಾ ಪಟ್ಟಿಯಲ್ಲಿ ನಮೂದಾಗಿರುವ ಹೆಸರಿನ ಅಭ್ಯರ್ಥಿಗಳು ಕೆಳಗೆ ತಿಳಿಸಿದ ಮೂಲ ದಾಖಲೆಗಳನ್ನು ಪರಿಶೀಲನೆ ವೇಳೆ ಹಾಜರುಪಡಿಸಬೇಕು.

ಶೈಕ್ಷಣಿಕ ಅರ್ಹತೆ ಪ್ರಮಾಣ ಪತ್ರ, ಜಾತಿ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು, ಗ್ರಾಮೀಣ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು, ಕನ್ನಡ ಮಾಧ್ಯಮ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು, ಅಭ್ಯರ್ಥಿಗಳು ಹಾಜರುಪಡಿಸಬೇಕಾದ ಮೂಲ ದಾಖಲೆಗಳ ಚೆಕ್‌ ಲಿಸ್ಟ್‌ , ವಯೋಮಿತಿಯನ್ನು ನಿಖರವಾಗಿ ನಿರೂಪಿಸುವ ಅರ್ಹತೆ ಪ್ರಮಾಣ ಪತ್ರ (ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ) ಕೂಡ ಆಗಲಿದೆ.

ಪ್ರಮಾಣ ಪತ್ರಗಳ ಪೈಕಿ ಮೀಸಲಾತಿಗೆ ಯಾವುದೋ ಅನ್ವಯವಾಗುತ್ತದೋ ಆ ಎಲ್ಲ ದಾಖಲೆಗಳನ್ನು ಹಾಜರು ಪಡಿಸಬೇಕಿರುತ್ತದೆ. ಮಾಜಿ ಸೈನಿಕರ ಮೀಸಲಾತಿ ಪ್ರಮಾಣ ಪತ್ರಗಳು, ಯೋಜನೆಗಳಿಂದ ನಿರಾಶ್ರಿತ ಅಭ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರ, ಅಂಗವಿಕಲ ಅಭ್ಯರ್ಥಿ ಮೀಸಲಾತಿ ಪ್ರಮಾಣ ಪತ್ರ, ಸೇವಾ ನಿರತ ಅಭ್ಯರ್ಥಿಗಳ ಪ್ರಮಾಣ ಪತ್ರ , ಇದರ ಜೊತೆಗೆ ಸಂಬಂಧಪಟ್ಟ ತಾಲ್ಲೂಕು ತಾಹಶೀಲ್ದಾರ್ ರವರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರದ ಜೊತೆಗೆ 2 ಪಾಸ್ ಪೋರ್ಟ್‌ ಅಳತೆಯ ಭಾವಚಿತ್ರ ಬೇಕಾಗುತ್ತದೆ.

ಅಭ್ಯರ್ಥಿಗಳು ಮೇಲ್ಕಂಡ ಎಲ್ಲಾ ಮೂಲ ದಾಖಲೆಗಳ 2 ಸೆಟ್ ಜೆರಾಕ್ಸ್‌ ಪ್ರತಿಗಳನ್ನು ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಸಲ್ಲಿಸಬೇಕು.

Leave A Reply

Your email address will not be published.