ಶನಿವಾರ ನಡೆಯಲಿದೆ ಬೃಹತ್ ಉದ್ಯೋಗಮೇಳ | ನೀವೂ ಭಾಗವಹಿಸಿ ನಿಮ್ಮ ಕನಸು ನನಸಾಗಿಸಿ!!!

ಉದ್ಯೋಗಾಕಾಂಕ್ಷಿಗಳೇ ನಿಮಗೊಂದು ಗುಡ್ ನ್ಯೂಸ್. ಬೆಂಗಳೂರಿನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಭಾಗವಹಿಸಿ ನೀವು ನಿಮ್ಮ ಕನಸು ನನಸಾಗಿಸಿಕೊಳ್ಳಬಹುದು. ಈ ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ. (ಉತ್ತಿರ್ಣ/ ಅನುತ್ತೀರ್ಣ), ಪಿಯುಸಿ, ಐಟಿಐ, ಡಿಪ್ಲೊಮಾ, ಸಾಮಾನ್ಯ ಪದವೀಧರರು ಹಾಗೂ ಸ್ನಾತ್ತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶಗಳು ಲಭ್ಯವಿರುತ್ತದೆ.

ಹೌದು, ಬೆಂಗಳೂರಿನ ರಾಜಾಜಿನಗರದ ಎಂ.ಇ.ಐ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಸೆಂಬರ್ 3ರ ಶನಿವಾರ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ತಾಂತ್ರಿಕ) ಹಾಗೂ ಎಂ. ಇ.ಐ ಪಾಲಿಟೆಕ್ನಿಕ್ ಕಾಲೇಜು ಸಹಯೋಗದೊಂದಿಗೆ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ನಿರುದ್ಯೋಗಿ ಯುವಕ/ ಯವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಅನುಕೂಲವಾಗುವಂತೆ ಶನಿವಾರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ತನಕ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಖಾಸಗಿ ವಲಯದ ಹಲವು ಹೆಸರಾಂತ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮಲ್ಲಿ ಲಭ್ಯವಿರುವ ವಿವಿಧ ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ನೇರವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. ಅಭ್ಯರ್ಥಿಗಳು ತಮ್ಮ ವೈಯುಕ್ತಿಕ ವಿವರಗಳ ರೆಸ್ಯೂಮ್‌ನ ಹಲವು ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಉದ್ಯೋಗ ಮೇಳ ನಡೆಯುವ ಸ್ಥಳ; ಎಂ. ಇ. ಐ. ಪಾಲಿಟೆಕ್ನಿಕ್ ಕಾಲೇಜು, ರಾಜಾಜಿನಗರ ಬೆಂಗಳೂರು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ 080-22611841/ 99027 36747/ 99649 07444/ 99649 08444 ವೆಬ್‌ಸೈಟ್ ಸಂಪರ್ಕಿಸಬಹುದಾಗಿದೆ.

Leave A Reply

Your email address will not be published.