ಬೆಳ್ತಂಗಡಿ : ಟ್ರ್ಯಾಕ್ಟರ್ ಪಲ್ಟಿ | ಓರ್ವ ಸಾವು, ಇನ್ನೋರ್ವ ಗಂಭೀರ!!

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ನೀರಿನ ಟ್ರ್ಯಾಕ್ಟರ್ ಪಲ್ಟಿ ಆಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಚಾರ್ಮಾಡಿ ಘಾಟ್ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ
ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ದುರಂತದಿಂದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಟ್ರ್ಯಾಕ್ಟ‌ರ್ ನಲ್ಲಿ ನೀರು ತುಂಬಿಸಿಕೊಂಡು ಚಾಲಕ ವಾಹನ ಚಲಾಯಿಸುತ್ತಿದ್ದ. ಅದಾಗಲೇ ಚಾಲಕನ ನಿಯಂತ್ರಣ ತಪ್ಪಿ ನೀರಿನ ಟ್ರ್ಯಾಕ್ಟರ್ ಟ್ಯಾಂಕ್ ಸಮೇತ ಪಲ್ಟಿಯಾಗಿದೆ. ಟ್ರ್ಯಾಕ್ಟ‌ರ್ ನಲ್ಲಿದ್ದ ಜಾರ್ಖಂಡ್‌ ಮೂಲದ ಕಾರ್ಮಿಕರಾದ ದಿಬೋ ಶಂಕರ್ ನಾಯಕ್ (22) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿದೆ.

ಗಾಯಾಳುವನ್ನು ತಕ್ಷಣವೇ ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಘಟನೆ ನಡೆದ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.