ರಾಜ್ಯದ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ!!
ರಾಜ್ಯದ ಶಾಲಾ ಮಕ್ಕಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ.
ರಾಜ್ಯ ಸರ್ಕಾರ ಶಾಲಾ ಮಕ್ಕಳ ವಿದ್ಯಾಭ್ಯಾಸವನ್ನು ಉತ್ತೇಜಿಸುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಉಚಿತ ಶಿಕ್ಷಣ, ಸ್ಕಾಲರ್ಶಿಪ್ ಜೊತೆಗೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ವ್ಯಾಸಂಗಕ್ಕೆ ನೆರವಾಗುತ್ತಿದೆ. ಈ ನಡುವೆ ಸರ್ಕಾರ ಶಾಲಾ ಮಕ್ಕಳಿಗೆ ಸಾರಿಗೆ ವ್ಯವಸ್ಥೆ ನೀಡಲು ಮುಂದಾಗಿದೆ.
ಈ ಕುರಿತು, ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಎನ್ ಡಬ್ಲ್ಯೂ ಕೆಎಸ್ ಆರ್ ಟಿಸಿ ವಾಹನ ಚಾಲನಾ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭ ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಖಾಸಗಿಯವರ ಸಹಭಾಗಿತ್ವದಲ್ಲಿ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.ವಿಶೇಷ ಸಾರಿಗೆ ಸೌಲಭ್ಯ ಯೋಜನೆಯಡಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶಾಲಾರಂಭ ಹಾಗೂ ಮುಕ್ತಾಯದ ವೇಳೆ ಸಮಯಕ್ಕೆ ಸರಿಯಾಗಿ ನಿಗದಿತ ಮಾರ್ಗದಲ್ಲಿ ಬಸ್ ಸಂಚಾರ ನಡೆಸುವ ಮೂಲಕ ವಿದ್ಯಾರ್ಥಿಗಳ ಸಮಯಕ್ಕೆ ಸರಿಯಾಗಿ ಶಾಲೆಗೆ ತಲುಪಲು ಅನುಕೂಲವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ