Karnataka Weather Updates : ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ | ಹವಾಮಾನ ಇಲಾಖೆ ವರದಿ

ಕರ್ನಾಟಕ(Karnataka)ದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 5 ರಿಂದ 9ರವರೆಗೆ ಸಾಧಾರಣ ಮಳೆ(Rain) ಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಚುಮು ಚುಮು ಚಳಿಯ ನಡುವೆಯೂ ರಾಜ್ಯದಲ್ಲಿ ವರುಣನ ದರ್ಶನವಾಗುವ ಸಾಧ್ಯತೆ ಇರುವ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಕರ್ನಾಟಕ(Karnataka)ದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 5 ರಿಂದ 9ರವರೆಗೆ ಸಾಧಾರಣ ಮಳೆ(Rain)ಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಮಳೆಯ ನಿರೀಕ್ಷೆಯಿದ್ದು, ಡಿಸೆಂಬರ್ 05 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು, ರಾಮನಗರದಲ್ಲಿ ಮಳೆಯಾಗುವ ಲಕ್ಷಣಗಳು ದಟ್ಟವಾಗಿದೆ.

ದಾವಣಗೆರೆಯಲ್ಲಿ ಅತಿ ಕನಿಷ್ಠ ಉಷ್ಣಾಂಶ 13.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ ಎಂದು ಅಂದಾಜಿಸಲಾಗಿದೆ. ಇದರ ಜೊತೆಗೆ ಇನ್ನೂ ಕೆಲವು ಕಡೆಗಳಲ್ಲಿ ಬೆಳಗಿನ ಹೊತ್ತಿನಲ್ಲಿ ಮಂಜು ಮುಸುಕಿದಂತಹ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ನಡುವೆ,ಡಿಸೆಂಬರ್ 9ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿಯು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಲಕ್ಷಣಗಳಿವೆ.

Leave A Reply

Your email address will not be published.