SBI Recruitment 2022 : ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ !!!
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕೋ ಪ್ರತಿಯೊಬ್ಬರಿಗೂ ಇದು ಸಿಹಿ ಸುದ್ದಿ ಎಂದೇ ಹೇಳಬಹುದು. ದೇಶದ ಪ್ರತಿಷ್ಠಿತ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವು ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಎಸ್ ಬಿಐ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ.
ಆಸಕ್ತಿವುಳ್ಳ, ಅರ್ಹ ಅಭ್ಯರ್ಥಿಗಳು ಆನ್ ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಇದೇ ತಿಂಗಳು 12ನೇ ತಾರೀಖಿನೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಸಂಸ್ಥೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
ಹುದ್ದೆ: ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 60
ವಯೋಮಿತಿ: 25ರಿಂದ 35 ವರ್ಷ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 12-12-2022
ಹುದ್ದೆಗಳ ವಿವರ :
ಮ್ಯಾನೇಜರ್ (ಕ್ರೆಡಿಟ್ ವಿಶ್ಲೇಷಕ) — 55 ಹುದ್ದೆಗಳು
ಮ್ಯಾನೇಜರ್ (ಪ್ರಾಜೆಕ್ಟ್ ಡಿಜಿಟಲ್ ಪಾವತಿಗಳು) – 5
ಮ್ಯಾನೇಜರ್ (ಪ್ರಾಡೆಕ್ಟ್ ಡಿಜಿಟಲ್ ಪ್ಲಾಟ್ ಫಾರ್ಮ್ಗಳು) – 2
ಮ್ಯಾನೇಜರ್ ( ಪ್ರಾಡೆಕ್ಟ್ ಡಿಜಿಟಲ್ ಪಾವತಿಗಳು ) – 2
ವಿದ್ಯಾರ್ಹತೆ : MBA/ MMS (ಹಣಕಾಸು)/ PGDBA/ PGDBM/ CA/ CFA/ ICWA ಪದವಿ ಹೊಂದಿರಬೇಕು
ವಯೋಮಿತಿ : ಮೀಸಲಾತಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ಅವಕಾಶವಿದೆ.
ಅರ್ಜಿ ಸಲ್ಲಿಕೆ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳು : 750 ರೂ, SC/ST ಅಭ್ಯರ್ಥಿಗಳು: ಶುಲ್ಕ ಇಲ್ಲ
ಅಭ್ಯರ್ಥಿಗಳೇ ಗಮನಿಸಿ : ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಓದಿರಿ. ನಂತರ ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ