ಚಂದನವನದ ಹಿರಿಯ ನಿರ್ದೇಶಕ ದೊರೈ ಭಗವಾನ್ ಆಸ್ಪತ್ರೆಗೆ ದಾಖಲು!

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

 

ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಅವರನ್ನು ದಾಖಲಿಸಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕನಾಗಿ ಕನ್ನಡ ಚಿತ್ರರಂಗದಲ್ಲಿ ಭಗವಾನ್ ಗುರುತಿಸಿಕೊಂಡಿದ್ದರು.

ಎಪ್ಪತ್ತು, ಎಂಬತ್ತರ ದಶಕದಲ್ಲಿ ಕನ್ನಡ ಚಿತ್ರರಂಗಕ್ಕೆ ಶ್ರೇಷ್ಠ ಚಿತ್ರಗಳನ್ನು ನೀಡಿದ ಗರಿಮೆ ದೊರೈ ಮತ್ತು ಭಗವಾನ್ ಜೋಡಿಗೆ ಸಲ್ಲುತ್ತದೆ.

ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 89 ವರ್ಷದ ಭಗವಾನ್ ಅವರು ಇತ್ತೀಚೆಗೆ ಶೀತದಿಂದ ಬಳಲುತ್ತಿದ್ದು, ಉಸಿರಾಟದ ಸಮಸ್ಯೆಯಿಂದ 2 ದಿನದ ಹಿಂದೆಯೇ ಆಸ್ಪತ್ರೆಗೆ ರವಾನಿಸಲಾಗಿದೆ.

Leave A Reply

Your email address will not be published.