ಡಿ.17 ರಾಜ್ಯಾದ್ಯಂತ ಕಾಲೇಜುಗಳ ಬಂದ್ ಗೆ ಕರೆ!
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ NSUI ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್ ಸುದ್ದಿಗೋಷ್ಠಿ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿ.17ಕ್ಕೆ ರಾಜ್ಯದ್ಯಂತ ಕಾಲೇಜುಗಳು ಬಂದ್ ಗೆ ಕರೆ ನೀಡಲಾಗಿದೆ.
ರಾಜ್ಯದ ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಆರೋಪಿಸಿದ್ದಾರೆ.
ಸಾಕಷ್ಟು ಕಾಲೇಜುಗಳಲ್ಲಿ ಮೂಲ ಸೌಕರ್ಯಗಳ ಕೊರತೆ, ಉಚಿತ ಬಸ್ ಸೌಕರ್ಯ, ವಿದ್ಯಾರ್ಥಿ ವೇತನ, ವಿದ್ಯಾರ್ಥಿ ನಿಲಯ, ಉಪನ್ಯಾಸಕರ ಕೊರತೆ ಕಾಣುತ್ತಿದೆ. ಮಾತ್ರವಲ್ಲ, ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶಗಳನ್ನು ಸಹ ನೀಡದೆ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಕೀರ್ತಿ ಗಣೇಶ್ ಆರೋಪಿಸಿದ್ದಾರೆ. ಆದರೂ ಕೂಡಾ ಸರ್ಕಾರ ವಿದ್ಯಾರ್ಥಿಗಳ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ 17 ಡಿಸೆಂಬರ್ 2022 ರಂದು ರಾಜ್ಯದ್ಯಂತ ಎಲ್ಲಾ ಕಾಲೇಜುಗಳು ಬಂದ್ ಗೆ ಕರೆ ನೀಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಮಾರುತಿ ಪ್ರಧಾನ ಕಾರ್ಯದರ್ಶಿಗಳಾದ ರಫೀಕ್ ಅಲಿ ಮತ್ತು ರಾಕೇಶ್, ಕಾರ್ಯದರ್ಶಿ ಮನ್ಮಂತ್, ಬೆಂಗಳೂರು ವಿಶ್ವವಿದ್ಯಾನಿಲಯ ಅಧ್ಯಕ್ಷ ಲಕ್ಷಯ ರಾಜ್, ಬೆಂಗಳೂರು ಜಿಲ್ಲಾಧ್ಯಕ್ಷ ಮಧು ಬೆಂಗಳೂರು ಗ್ರಾಮಾಂತರ ಅಧ್ಯಕ್ಷ ಮುಕೇಶ್ ಇನ್ನಿತರ NSUI ಪದಾಧಿಕಾರಿಗಳು ಹಾಜರಿದ್ದರು.