ESIC Karnataka Recruitment 2022 : ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ !

ESIC Karnataka Recruitment 2022: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ(Employees State Insurance Corporation Karnataka)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.

ಡಿಸೆಂಬರ್ 29ರಂದು ಸಂದರ್ಶನ (Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕಲಬುರ್ಗಿ(Kalaburagi)ಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಹುದ್ದೆ : ಸೀನಿಯರ್ ರೆಸಿಡೆಂಟ್(Senior Resident) ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ
ಹುದ್ದೆ: ಸೀನಿಯರ್ ರೆಸಿಡೆಂಟ್
ಒಟ್ಟು ಹುದ್ದೆ : 53
ವೇತನcಮಾಸಿಕ : ರೂ.1,23,485
ಉದ್ಯೋಗದ ಸ್ಥಳ: ಕಲಬುರ್ಗಿ

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 03/12/2022
ಸಂದರ್ಶನ ನಡೆಯುವ ದಿನ: 29/12/2022

ಸಂದರ್ಶನ ನಡೆಯುವ ಸ್ಥಳ: ESIC ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಕಲಬುರಗಿ, ಕರ್ನಾಟಕ
 
ವಿದ್ಯಾರ್ಹತೆ : ಆಸಕ್ತ ಅರ್ಜಿ ಸಲ್ಲಿಸೋ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಎಂಡಿ, ಎಂಎಸ್, ಡಿಎನ್​ಬಿ ಪೂರ್ಣಗೊಳಿಸಿರಬೇಕು

ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 29, 2022ಕ್ಕೆ ಗರಿಷ್ಠ 44 ವರ್ಷ ಮೀರಿರಬಾರದು.

ವೇತನ : ಅಭ್ಯರ್ಥಿಗಳು ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ.1,23,485 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ: ಎಸ್​​ಸಿ/ಎಸ್​ಟಿ/ ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ- 225 ರೂ.
ಅಭ್ಯರ್ಥಿಗಳು ಡಿಮ್ಯಾಂಡ್ ಡ್ರಾಫ್ಟ್​ (ಡಿಡಿ) ಮೂಲಕ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.