PU ವಿದ್ಯಾರ್ಥಿಗಳಿಗೆ ಉಚಿತ ನೀಟ್,ಜೆಇಇ ಪರೀಕ್ಷೆ ತರಬೇತಿ : ಅರ್ಜಿ ಸಲ್ಲಿಸಲು ಡಿ.19 ಕೊನೆಯ ದಿನಾಂಕ
ಸರ್ಕಾರದಿಂದ ಪಿಯು ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ ನೀಡಿದೆ. ಹೌದು ಸದರಿ ಪರೀಕ್ಷಾ ಪೂರ್ವ ತರಬೇತಿಗಳಿಗೆ ಸಂಬಂಧಿಸಿದಂತೆ ನೀಟ್ (NEET) ಹಾಗು ಜೆಇಇ (JEE Mains & Advanced) ಪರೀಕ್ಷಾ ಪೂರ್ವ ತರಬೇತಿಗಳನ್ನು ಉಚಿತವಾಗಿ ನೀಡಲು ಯೋಜನೆ ರೂಪಿಸಿದೆ.
ಮುಖ್ಯವಾಗಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ ಹಾಗು ಕಲಬುರಗಿ ನಗರಗಳಲ್ಲಿ ಮಾತ್ರ ತರಬೇತಿ ನೀಡಲಾಗುತ್ತದೆ ಮತ್ತು ಅಭ್ಯರ್ಥಿಗಳು ತರಬೇತಿಗೆ ನಿಯಮಿತವಾಗಿ ಹಾಜರಾಗಬೇಕು. ಸರ್ಕಾರ ಕಾಲಕಾಲಕ್ಕೆ ನೀಡುವ ನಿರ್ದೇಶನದಂತೆ ಸದರಿ ಕೋಚಿಂಗ್ ಅನ್ನು ಆಫ್‌ಲೈನ್ ಅಥವಾ ಆನ್‌ಲೈನ್ ಮೂಲಕ ನೀಡಲಾಗುವುದು ಪ್ರಕಟಣೆ ಮೂಲಕ ತಿಳಿಸಲಾಗಿದೆ.
ಪ್ರಸ್ತುತ ಹಿಂದುಳಿದ ವರ್ಗಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು, ಮೈಸೂರು, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ / 10+1 ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಸದರಿ ಪರೀಕ್ಷಾ ಪೂರ್ವ ತರಬೇತಿಗಳಿಗೆ ಸಂಬಂಧಿಸಿದಂತೆ ನೀಟ್ (NEET) ಹಾಗು ಜೆಇಇ (JEE Mains & Advanced) ಪರೀಕ್ಷಾ ಪೂರ್ವ ತರಬೇತಿಗಳನ್ನು ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ ಹಾಗು ಕಲಬುರಗಿ ನಗರಗಳಲ್ಲಿ ಮಾತ್ರ ನೀಡಲಿದ್ದು, ಅಭ್ಯರ್ಥಿಗಳು ತರಬೇತಿಗೆ ನಿಯಮಿತವಾಗಿ ಹಾಜರಾಗಬೇಕು ಎಂದು ಸೂಚಿಸಲಾಗಿದೆ.
ಸರ್ಕಾರ ಕಾಲಕಾಲಕ್ಕೆ ನೀಡುವ ನಿರ್ದೇಶನದಂತೆ ಸದರಿ ಕೋಚಿಂಗ್ ಅನ್ನು ಆಫ್‌ಲೈನ್ ಅಥವಾ ಆನ್‌ಲೈನ್ ಮೂಲಕ ನೀಡಲಾಗುವುದು. ಆಸಕ್ತ ಮತ್ತು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ 19-12-2022 ಕೊನೆಯ ದಿನವಾಗಿರುತ್ತದೆ. ಈ ದಿನಾಂಕದೊಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಹತೆ ಮತ್ತು ಸೂಚನೆಗಳು:
- ವಿದ್ಯಾರ್ಥಿಯು ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಅಥವಾ 3ಬಿ ಯ ಜಾತಿಗೆ ಸೇರಿರಬೇಕು.
- ಅಭ್ಯರ್ಥಿಯ ಮತ್ತು ಕುಟುಂಬದ ಆದಾಯ ಒಟ್ಟು ವಾರ್ಷಿಕ ಆದಾಯ ಮಿತಿ ಆರು ಲಕ್ಷ.
- ಜಾತಿ ಮತ್ತು ಆದಾಯ ಪ್ರಮಾಣ ಪತ್ರವು ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಹೆಸರಿನಲ್ಲಿಯೇ ಇರಬೇಕು.
- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸದರಿ ಪರೀಕ್ಷಾ ಪೂರ್ವ ತರಬೇತಿಗಳನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ /ಹತ್ತನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
- ಸದರಿ ಪರೀಕ್ಷಾ ಪೂರ್ವ ತರಬೇತಿಯನ್ನು ಖಾಸಗಿ ಸಂಸ್ಥೆಗಳ ಮೂಲಕ ನೀಡಲಾಗುವುದು.
- ತರಬೇತಿ ಉಚಿತವಾಗಿದ್ದು, ತರಬೇತಿ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತರಬೇತಿ ಭತ್ಯೆ, ಪ್ರಯಾಣ ಭತ್ಯೆ ಹಾಗೂ ಇತರೆ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ.
- ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ https://bcwd.karnataka.gov.in/ ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.
- ಸಹಾಯ ವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
ಪರೀಕ್ಷಾ ಪೂರ್ವ ತರಬೇತಿಗಳಿಗೆ ಸಂಬಂಧಿಸಿದಂತೆ ನೀಟ್ (NEET) ಹಾಗು ಜೆಇಇ (JEE Mains & Advanced) ಪರೀಕ್ಷಾ ಪೂರ್ವ ತರಬೇತಿಗಳನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.