ಉಚಿತ ವಿದ್ಯುತ್ ಯೋಜನೆ ತ್ವರಿತ ಅನುಷ್ಠಾನ – ಶ್ರೀನಿವಾಸ ಪೂಜಾರಿ ಸೂಚನೆ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಯೋಜನೆಯ ಅನುಷ್ಠಾನ ತ್ವರಿತಗೊಳಿಸುವಂತೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 

ಈ ಸಭೆಯಲ್ಲಿ ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಕುಮಾರ್ ನಾಯಕ್ ಜಿ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ. ಕೆ ರಾಕೇಶ್ ಕುಮಾರ್, ಸಲಹೆಗಾರ ಡಾ॥ ಇ ವಂಕಟಯ್ಯ,ಇ ಆಡಳಿತ ಇಲಾಖೆ ನಿರ್ದೇಶಕ ದಿಲೀಶ್ ಸಾಮಿ ಹಾಗೂ ಇಂಧನ ಇಲಾಖೆಯ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು.

ಈ ಕುರಿತು ವಿಕಾಸಸೌಧದಲ್ಲಿ ಮಂಗಳವಾರ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಕ್ಕೆ ಪ್ರತಿ ತಿಂಗಳು 75 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಯೋಜನೆಯ ವಾಸ್ತವಿಕ ಅನುಷ್ಠಾನ ಸರ್ಕಾರದ ಯೋಜನೆಯ ಗುರಿಯಾಗಿದ್ದು, ಈ ಸಲುವಾಗಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕಾಗಿದ್ದು ಈ ಯೋಜನೆ ಜಾರಿಗೆ ತರಲು ಯಾವುದೇ ಅಡಚಣೆ ಉಂಟಾಗದಂತೆ ನಿಯಮಗಳನ್ನು ಸರಳೀಕರಣ ಮಾಡುವಂತೆ ಈ ಸಂದರ್ಭದಲ್ಲಿ ಸೂಚಿಸಿದ್ದಾರೆ.

ಡಿಬಿಟಿ ಹೊರತುಪಡಿಸಿ ಸರಳ ಮಾರ್ಗಗಳಲ್ಲಿ ಯೋಜನೆ ಜಾರಿಗೆ ತಂದು ಇದಕ್ಕೆ ಪರ್ಯಾಯ ವ್ಯವಸ್ಥೆ ರೂಪಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ. ಈ ಯೋಜನೆಗೆ ವಾರ್ಷಿಕ 800 ಕೋಟಿ ರೂ. ಲಭ್ಯವಾಗುತ್ತಿದ್ದು, ಇನ್ನೂ ಮುಂದಿನ ದಿನಗಳಲ್ಲಿ ಏರಿಕೆ ಆಗಲಿರುವ ಕುರಿತು ಸಚಿವ ಶ್ರೀನಿವಾಸ ಪೂಜಾರಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಸ್ಕಾಂಗಳಲ್ಲಿ ಬಾಕಿ ಉಳಿದಿರುವ ಫಲಾನುಭವಿ ಕುಟುಂಬಗಳ ವಿದ್ಯುತ್ ಶುಲ್ಕ ವಸೂಲಿಯ ಜೊತೆಗೆ ಪರಿಹಾರ ಕ್ರಮಗಳಿಗೆ ಸುಲಭ ಮಾರ್ಗೋಪಾಯ ಕಂಡುಕೊಳ್ಳಬೇಕಾಗಿದ್ದು , ಆದರೆ ಯೋಜನೆಯ ತ್ವರಿತವಾಗಿ ಅನುಷ್ಠಾನವಾಗಬೇಕಾಗಿರುವ ಅಗತ್ಯತೆಯ ಬಗ್ಗೆ ಸಚಿವರು ಈ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.

Leave A Reply

Your email address will not be published.