HAL Recruitment 2022: HALನಲ್ಲಿ ಡಯೆಟಿಷಿಯನ್ ಹುದ್ದೆ| ಆಸಕ್ತರು ಈಗಲೇ Apply ಮಾಡಿ

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಖಾಲಿ ಇರುವ ಹುದ್ದೆಗೆ ಡಿಸೆಂಬರ್ 20, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.

 

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 20/12/2022

ಹುದ್ದೆ : ಡಯೆಟಿಷಿಯನ್‌
ಹುದ್ದೆ ಸಂಖ್ಯೆ : 1

ವಿದ್ಯಾರ್ಹತೆ : ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೋಮಾ, ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 1, 2022ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ? ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ : ಚೀಫ್ ಮ್ಯಾನೇಜರ್ (HR)
ಇಂಡಸ್ಟ್ರಿಯಲ್ ಹೆಲ್ತ್​ ಸೆಂಟರ್
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್​)
ಸುರಂಜನದಾಸ್ ರಸ್ತೆ (ಹಳೇ ವಿಮಾನ ನಿಲ್ದಾಣದ ಹತ್ತಿರ)
ಬೆಂಗಳೂರು-560017

Leave A Reply

Your email address will not be published.