ರುಂಡವಿಲ್ಲದ ಬಾಲಕನ ಶವ ಪತ್ತೆ, ನರ ಬಲಿ ಶಂಕೆ

ಇಂಚೋರಿ ಪೊಲೀಸ್ ಠಾಣಾ ವ್ಯಾಪ್ತಿಯ ನಂಗ್ಲಿಶಾ ಗ್ರಾಮದಲ್ಲಿ ಉತ್ತರ ಪ್ರದೇಶ(Uttar Pradesh) ದಲ್ಲಿ ಘಟನೆ ನಡೆದಿದೆ . ಮೀರತ್​ನಲ್ಲಿ ರುಂಡವಿಲ್ಲದ ಬಾಲಕನ ಶವವೊಂದು ಪತ್ತೆಯಾಗಿದ್ದು, ನರ ಬಲಿ ಇರಬಹುದೆಂಬ ಅನುಮಾನ ವ್ಯಕ್ತವಾಗಿದೆ.

 

ಪೊಲೀಸರ ಪ್ರಕಾರ, ಬಾಲಕನನ್ನು ನವೆಂಬರ್ 30 ರಂದು ಪ್ರೀತ್ ವಿಹಾರ್‌ನಲ್ಲಿರುವ ನಿವಾಸದಿಂದ ಅಪಹರಿಸಲಾಗಿದ್ದು ಆ ಬಳಿಕ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಮೀರತ್​ನ ಹೊಲವೊಂದರಲ್ಲಿ ರುಂಡ ಇಲ್ಲದ ಶವ ಪತ್ತೆಯಾಗಿದ್ದು, ಈ ಸಾವಿಗೆ ನರಬಲಿಯೇ ಕಾರಣವಾಗಿರಬಹುದು ಎಂಬ ಊಹಾಪೋಹ ಗಳು ವ್ಯಕ್ತವಾಗಿದೆ.

ಈ ಕುರಿತು ಪೋಲಿಸ್ ತನಿಖೆ ನಡೆಸಿದ್ದು, ಜಗತ್ಪುರಿ ನಿವಾಸಕ್ಕೆ ಭೇಟಿ ನೀಡಿ ಖಾಕಿ ಪಡೆ ಆರೋಪಿಯನ್ನು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆ ನಡೆಸಿದ ಬಳಿಕ ಆರೋಪಿಯು ಮೀರತ್‌ನ ಕಬ್ಬಿನ ಗದ್ದೆಯಲ್ಲಿ ಮಗುವನ್ನು ಎಸೆದಿರುವುದನ್ನು ಒಪ್ಪಿಕೊಂಡಿದ್ದಾನೆ. ಈ ಬಳಿಕ, ಪೋಲಿಸ್ ತಂಡವನ್ನು ಮೀರತ್‌ಗೆ ಕಳುಹಿಸಲಾಗಿದೆ.

ಸ್ಥಳೀಯ ಪೊಲೀಸರು ಈಗಾಗಲೇ ತಲೆ ಮತ್ತು ಕೈಕಾಲು ಇಲ್ಲದ ದೇಹವನ್ನು ಪತ್ತೆ ಮಾಡಿದ್ದು, ಸಮೀಪದಲ್ಲಿ ತಲೆ ಕೂಡ ಪತ್ತೆಯಾಗಿದೆ ಎನ್ನಲಾಗಿದೆ. ಸಾಮಾನುಗಳು ಮತ್ತು ಬಟ್ಟೆಗಳ ಆಧಾರದ ಮೇಲೆ, ಶವವು ಪ್ರೀತ್ ವಿಹಾರ್ ಪ್ರದೇಶದಲ್ಲಿ ಕಾಣೆಯಾದ ಬಾಲಕನದ್ದು ಎಂದು ಗುರುತಿಸಲಾಗಿದೆ. .

ಮಗುವಿನ ಭೀಕರ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ, ಅವನ ಕುಟುಂಬ ಮತ್ತು ಇತರ ಸ್ಥಳೀಯರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಇದರ ಜೊತೆಗೆ ಪ್ರೀತ್ ವಿಹಾರ್ ಪ್ರದೇಶದಲ್ಲಿ ರಸ್ತೆಯನ್ನು ತಡೆದಿದ್ದು ಅಲ್ಲದೆ ಆಕ್ರೋಶಗೊಂಡ ಪ್ರತಿಭಟನಾಕಾರರು ಗುಂಪನ್ನು ಚದುರಿಸಲು ಯತ್ನಿಸುತ್ತಿದ್ದ ಪೊಲೀಸರ ಮೇಲೆ ಕೂಡ ಕಲ್ಲು ತೂರಾಟ ನಡೆಸಿದ್ದಾರೆ. ಸದ್ಯ ಈ ನರಬಲಿ ಗೈದ ಆರೋಪಿಯನ್ನು ಬಂಧಿಸಲಾಗಿದ್ದು ಈ ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.

Leave A Reply

Your email address will not be published.