Police Action on PFI Issue: ಪಿಎಫ್‌ಐ ಮತ್ತು ಅಂಗಸಂಸ್ಥೆಗೆ ಸೇರುವವರಿಗೆ ಬಂತು ಪೊಲೀಸರಿಂದ ವಾರ್ನಿಂಗ್

ಕಾನೂನು ಬಾಹಿರ ಚಟುವಟಿಕೆಗಳನ್ನು ಕಡಿವಾಣ ಹಾಕುವ ನಿಟ್ಟಿನಲ್ಲಿ (ಯುಎಪಿಎ) ನ್ಯಾಯ ಮಂಡಳಿ ಸೂಚನೆಯ ಅನುಸಾರ ಪೊಲೀಸರು ಎಚ್ಚರಿಕೆಯ ಸಂದೇಶ ರವಾನಿಸಿದ್ದು, ನಗರದ ಎಲ್ಲ ವಿಭಾಗದ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಂದ ಪಿಎಫ್ಐ ಹಾಗೂ ಅಂಗ ಸಂಸ್ಥೆಗಳ ಕಾರ್ಯ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ವಾರ್ನಿಂಗ್ ನೀಡಲಾಗುತ್ತಿದೆ .


ಸೆಪ್ಟೆಂಬರ್ ತಿಂಗಳಲ್ಲಿ ಪಿಎಫ್ ಐ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಆದರೂ ಕೂಡ, ದೇಶದಲ್ಲಿ ಉಗ್ರ ಸಂಘಟನೆಗಳ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ಇದನ್ನು ತಡೆಯುವ ಸಲುವಾಗಿ ಪೊಲೀಸರು ಸಾರ್ವಜನಿಕರಿಗೆ ಮಾಹಿತಿ ನೀಡಲು ಮುಂದಾಗಿದ್ದಾರೆ. ಹೌದು!!..ದೇಶದಲ್ಲಿ ಪಿಎಫ್ಐ ಹಾಗೂ ಅದರ ಅಂಗ ಸಂಸ್ಥೆಗಳ ಕಾರ್ಯ ಚಟುವಟಿಕೆಗಳಲ್ಲಿ (Police Action on PFI Issue)ಭಾಗಿಯಾಗದಂತೆ ಸಾರ್ವಜನಿಕರಿಗೆ ಪೊಲೀಸರು ಖಡಕ್ ಸೂಚನೆ ನೀಡಿದ್ದಾರೆ.

ದೇಶದಾದ್ಯಂತ ನಡೆಯುತ್ತಿರುವ ತೀವ್ರ ಪ್ರತಿಭಟನೆಗಳು ಮತ್ತು ಭಯೋತ್ಪಾದಕ ಕೃತ್ಯಗಳ ಹಿಂದೆ ಪಿಎಫ್ಐ ಕೈವಾಡ ಇದೆ ಎಂಬ ಅನುಮಾನ ದಟ್ಟವಾಗಿದ್ದು. ಅಷ್ಟೇ ಅಲ್ಲದೆ, ಸೂಕ್ಷ್ಮ ಪ್ರದೇಶಗಳಲ್ಲಿ ಅಶಾಂತಿ ಹರಡಲು ಈ ಸಂಘಟನೆ ಪಿತೂರಿ ನಡೆಸುತ್ತಿದೆ ಎಂಬ ಅನುಮಾನ ಬುಗಿಲೆದ್ದಿದೆ.

ಪಿಎಫ್ಐ ಎಂದರೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಾಗಿದ್ದು, ಇದನ್ನು 2006 ರಲ್ಲಿ ಕೇರಳದಲ್ಲಿ ಸ್ಥಾಪಿಸಲಾಗಿದೆ. ಈ ಸಂಘಟನೆಯು ಭಾರತದಲ್ಲಿ ಅಳಿವಿನ ಅಂಚಿನಲ್ಲಿರುವ ವಿಭಾಗಗಳ ಸಬಲೀಕರಣಕ್ಕಾಗಿ ಕಾರ್ಯ ನಡೆಸುತ್ತಿದೆ ಎಂದು ಹೇಳಿ ಕೊಂಡರು ಕೂಡ ಇತ್ತೀಚಿನ ದಿನಗಳಲ್ಲಿ ಮೂಲಭೂತ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡುತ್ತಿದೆ ಎಂದು ಭದ್ರತಾ ಸಂಸ್ಥೆಗಳು ಹೇಳಿದ್ದು, ಈ ಸಂಸ್ಥೆಯನ್ನು ಕೇರಳದಲ್ಲಿ ಸ್ಥಾಪಿಸಲಾಗಿದ್ದು, ದೆಹಲಿಯಲ್ಲಿ ಇದರ ಕೇಂದ್ರ ಕಚೇರಿ ಕಾರ್ಯ ನಿರ್ವಹಿಸುತ್ತಿದೆ.


ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ), ಅದರ ಮಿತ್ರಪಕ್ಷಗಳು ಅಲ್ಲದೆ , ಇದರ ಎಲ್ಲಾ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ಘೋಷಿಸುವ ಮೂಲಕ ಸೆಪ್ಟೆಂಬರ್ ತಿಂಗಳಲ್ಲಿ ನಿಷೇಧ ಹೇರಿದೆ. ಇದರ ಜೊತೆಗೆ, ತಕ್ಷಣದಿಂದಲೇ ಜಾರಿಗೆ ಬರುವಂತೆ ಎಲ್ಲಾ ಸಂಘಟನೆಗಳಿಗೂ ಐದು ವರ್ಷಗಳ ಕಾಲ ನಿಷೇಧ ಹೇರಿ ಆದೇಶ ಕೂಡ ಹೊರಡಿಸಿದ್ದು, ಯುಎಪಿಎ ಕಾಯ್ದೆಯಡಿ ಸಂಘಟನೆಯನ್ನು ನಿಷೇಧಿಸಲಾಗಿದೆ.

ಆದರೂ ಕೂಡ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ (ಯುಎಪಿಎ) ನ್ಯಾಯ ಮಂಡಳಿ ಸೂಚನೆ ಮೇರೆಗೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ಕರೆಗಂಟೆಯನ್ನು ನೀಡುತ್ತಿದ್ದು, ನಗರದ ಎಲ್ಲ ವಿಭಾಗದ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಂದ ಮನವರಿಕೆ ಕಾರ್ಯ ನಡೆಯುತ್ತಿದೆ.

ಟ್ರಿಬ್ಯೂನಲ್ ಸೂಚನೆಯನ್ನು ಎಲ್ಲಾ ವಿಭಾಗದ ಡಿಸಿಪಿಗಳಿಗೆ ರವಾನೆ ಮಾಡಲಾಗಿದ್ದು, ಇದೀಗ ಆಯಾ ಠಾಣಾ ವ್ಯಾಪ್ತಿಯಲ್ಲಿ ಮೈಕ್ ಮೂಲಕ ಪೊಲೀಸರು ಪ್ರಕಟಣೆ ಹೊರಡಿಸಿದ್ದು, ಮತ್ತೊಂದೆಡೆ ಡಿಸಿ ಕಚೇರಿಯ ನೋಟಿಸ್ ಬೋರ್ಡ್ ನಲ್ಲೂ ಕೂಡ ಈ ಬಗ್ಗೆ ಪ್ರಕಟಿಸಲು ಸೂಚನೆ ನೀಡಲಾಗಿದೆ.

ಪೊಲೀಸ್ ಸೂಚನೆಗಳು ಹೀಗಿವೆ;
ಪಿಎಫ್ಐ ಹಾಗೂ ಅದರ ಅಂಗ ಸಂಸ್ಥೆಗಳನ್ನ ಕೇಂದ್ರ ಸರ್ಕಾರ ನಿಷೇಧಿಸಿದ್ದು, ಹಾಗಾಗಿ, ಸಾರ್ವಜನಿಕರು ಈ ಸಂಘಟನೆಗೆ ಸೇರುವುದಾಗಲಿ ಅಥವಾ ಸಂಘಟನೆಗಳ ಕಾರ್ಯ ಚಟುವಟಿಕೆಗಳಲ್ಲಿ ಭಾಗಿಯಾಗುವಂತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದೆ. ಈ ಬಗ್ಗೆ ಯಾವುದೇ ಮಾಹಿತಿ ಕಂಡು ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಕೂಡಲೇ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.

ಪಿಎಫ್ಐ ಮತ್ತು ಅದರ ಅಂಗ ಸಂಸ್ಥೆಗಳ ನಿಷೇಧದ ಬಗ್ಗೆ ಪ್ರಚಾರ ಮಾಡಲು ನ್ಯಾಯಮಂಡಳಿಯಿಂದ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಲೌಡ್ ಸ್ಪೀಕರ್ ಮೂಲಕ ನಗರದಲ್ಲಿ ಪೊಲೀಸರು ಪ್ರಚಾರ ನಡೆಸುತ್ತಿದ್ದಾರೆ. ಅಲ್ಲದೆ ,ಪಿಎಫ್ಐ ಸಂಘಟನೆ ಸಂಬಂಧಿತ ಕಾರ್ಯ ಚಟುವಟಿಕೆ ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕಾಗಿದೆ.

Leave A Reply

Your email address will not be published.