ECIL Recruitment 2022: ಟೆಕ್ನಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ | ಡಿ.14ರಂದು ನೇರ ಸಂದರ್ಶನ- ಮಾಸಿಕ ರೂ.31,000 ಸಂಬಳ
ECIL Recruitment 2022: ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (Electronics Corporation of India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಟೆಕ್ನಿಕಲ್ ಆಫೀಸರ್ ಹುದ್ದೆ ಖಾಲಿ ಇದ್ದು ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 07/12/2022
ಸಂದರ್ಶನ ನಡೆಯುವ ದಿನಾಂಕ: 14/12/2022
ಹುದ್ದೆ : ಒಟ್ಟು 22 ಟೆಕ್ನಿಕಲ್ ಆಫೀಸರ್(Technical Officer) ಹುದ್ದೆಗಳು ಖಾಲಿ ಇದೆ. ಈ ತಿಂಗಳ ಡಿಸೆಂಬರ್ 14ರಂದು ಸಂದರ್ಶನ (Walk-in-Interview) ನಡೆಯಲಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಸಂಸ್ಥೆ : ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್
ಹುದ್ದೆ : ಟೆಕ್ನಿಕಲ್ ಆಫೀಸರ್
ಒಟ್ಟು ಹುದ್ದೆ : 22
ಉದ್ಯೋಗದ ಸ್ಥಳ : ಬೆಂಗಳೂರು
ವೇತನ ಮಾಸಿಕ ₹ 25,000-31,000
ವಿದ್ಯಾರ್ಹತೆ: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ECE/EEE/E&I/CSE/ETC/ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ಹುದ್ದೆಯ ಮಾಹಿತಿ:
ಮುಂಬೈ-7
ನಲಿಯಾ-1
ಬೆಂಗಳೂರು-1
ಕೈಗಾ-5
ರಾವತ್ಭಟ, ಕೋಟಾ-1
ಅಲಹಾಬಾದ್-1
ಅಂಡಮಾನ್ & ನಿಕೋಬಾರ್-2
ವಿಜಾಗ್-1
ಯಾದಗಿರಿ-3
ವಯೋಮಿತಿ: ಅಭ್ಯರ್ಥಿಗಳ ವಯಸ್ಸು ನವೆಂಬರ್ 30, 2022ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳು- 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳು- 5 ವರ್ಷ, PWD ಅಭ್ಯರ್ಥಿಗಳು- 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಕ್ವಾಲಿಫಿಕೇಶನ್, ಅನುಭವ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ:
ಫ್ಯಾಕ್ಟರಿ ಮೇನ್ ಗೇಟ್
ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್
ECIL ಪೋಸ್ಟ್
ಹೈದರಾಬಾದ್-500062