ಗುಜರಾತ್ ಚುನಾವಣೆ । AAP ಮುಖ್ಯಮಂತ್ರಿ ಅಭ್ಯರ್ಥಿ ಇಸುದನ್‌ ಗಧ್ವಿಗೆ ಹೀನಾಯ ಸೋಲು, ಪಟೀದಾರ್ ನಾಯಕ ಬಿಜೆಪಿಯ ಹಾರ್ದಿಕ್ ಪಟೇಲ್‍ ಗೆ ಮತ್ತು ಕಾಂಗ್ರೆಸ್ ನ ಜಿಗ್ನೇಶ್‌ ಮೇವಾನಿಗೆ ಗೆಲುವು !

ಗುಜರಾತಿನ ಚುನಾವಣೆಯಲ್ಲಿ ಪ್ರತಿಷ್ಠಿತ ಕ್ಷೇತ್ರದ ಚುನಾವಣೆಯಲ್ಲಿ ಮೂವರು ಯುವಕರಲ್ಲಿ ಇಬ್ಬರು ಗೆದ್ದಿದ್ದರೆ ಕ್ಷೇತ್ರದ ಓರ್ವ ಸೋತು ಹೋಗಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಪಟೀದಾರ್ ಚಳುವಳಿಯ ನಾಯಕ ಹಾರ್ದಿಕ್ ಪಟೇಲ್‍ಗೆ ಗುಜರಾತ್ ಚುನಾವಣೆಯಲ್ಲಿ (Gujarat Election) ಭರ್ಜರಿ ಜಯ ದೊರೆತಿದೆ. ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದ ಯುವ ನಾಯಕ ಜಿಗ್ನೇಶ್‌ ಮೇವಾನಿ (Jignesh Mevani) ಎರಡನೇ ಬಾರಿ ಜಯಗಳಿಸಿದ್ದಾರೆ. ಆಮ್‌ ಆದ್ಮಿ ಪಕ್ಷದ (AAP) ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಇಸುದನ್‌ ಗಧ್ವಿ (Isudan Gadhvi) ಅವರು ಹೀನಾಯ ಸೋಲು ಕಂಡಿದ್ದಾರೆ.

ವಿರಾಮಗಾಮ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಹಾರ್ದಿಕ್ ಪಟೇಲ್ ಅವರು, ಕಾಂಗ್ರೆಸ್ ಲಖಾಭಾಯ್ ಭಾರವಾಡ್ ಅವರನ್ನು 50,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ. ಆರಂಭದದಿಂದಲೂ ಮುನ್ನಡೆ ಕಾಯ್ದು ಕೊಂಡು ಬಂದಿದ್ದ ಪಟೇಲ್ ಅವರು ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. 2022ರ ಮೇ ತಿಂಗಳಲ್ಲಿ ಅವರನ್ನು ಕಾಂಗ್ರೆಸ್ ಪಕ್ಷ ವಿರೋಧಿ ಚಟುವಟಿಕೆಗಳ ಕಾರಣ ನೀಡಿ ಉಚ್ಚಾಟನೆ ಮಾಡಿತ್ತು. ತಕ್ಷಣ ಅವರು ಬಿಜೆಪಿ ಸೇರ್ಪಡೆಯಾಗಿದ್ದರು.

ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದ ಯುವ ನಾಯಕ ಜಿಗ್ನೇಶ್‌ ಮೇವಾನಿ (Jignesh Mevani) ಎರಡನೇ ಬಾರಿ ಜಯಗಳಿಸಿದ್ದಾರೆ.
ಗುಜರಾತ್‌ನ ವಡ್ಗಾಂ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮೇವಾನಿಗೆ ಬಿಜೆಪಿ ಅಭ್ಯರ್ಥಿ ಮಣಿಲಾಲ್ ವಘೇಲಾ ತೀವ್ರ ಸ್ಪರ್ಧೆ ನೀಡಿದ್ದರು. ಆದರೆ ಅಂತಿಮವಾಗಿ 2000 ಕ್ಕೂ ಹೆಚ್ಚು ಮತಗಳಿಂದ ಮೇವಾನಿ ವಿಜಯದ ನಗೆ ಬೀರಿದ್ದಾರೆ. ಕಳೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಮೇವಾನಿ ಬಿಜೆಪಿ 19000 ಕ್ಕೂ ಅಧಿಕ ಮತಗಳಿಂದ ಗೆದ್ದಿದ್ದರು. ಪಕ್ಷೇತರರಾಗಿದ್ದ ಅವರು 2021ರಲ್ಲಿ ಮೇವಾನಿ ಕಾಂಗ್ರೆಸ್‌ ಪಕ್ಷ ಸೇರಿದ್ದರು.

ಆಮ್‌ ಆದ್ಮಿ ಪಕ್ಷದ (AAP) ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಇಸುದನ್‌ ಗಧ್ವಿ (Isudan Gadhvi) ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲನುಭವಿಸಿದ್ದಾರೆ. ಗುಜರಾತ್‌ನಲ್ಲಿ ಎಎಪಿ ಸಿಎಂ ಅಭ್ಯರ್ಥಿಯಾಗಿದ್ದ ಇಸುದನ್ ಗಧ್ವಿ ಅವರು ಖಂಭಾಲಿಯಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ 18,000 ಕ್ಕೂ ಹೆಚ್ಚು ಮತಗಳಿಂದ ಸೋತಿದ್ದಾರೆ.

ಈಗಾಗಲೇ ಗುಜರಾತ್‍ನಲ್ಲಿ ಬಿಜೆಪಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಸತತ 7ನೇ ಬಾರಿಗೆ ಗುಜರಾತ್ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಲಿದೆ. ಗುಜರಾತ್‌ನ 17ನೇ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಭೂಪೇಂದ್ರ ಪಟೇಲ್‌ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Leave A Reply

Your email address will not be published.