IIMB Recruitment 2022: ಪಿಜಿ ಆದವರಿಗೆ ಉದ್ಯೋಗ | ಮಾಸಿಕ ವೇತನ ರೂ.36,000
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್
ಬೆಂಗಳೂರು(Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಈ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.
ಒಟ್ಟು 2 ಅಕಾಡೆಮಿಕ್ ಅಸೋಸಿಯೇಟ್(Academic Associate) ಹುದ್ದೆಗಳು ಖಾಲಿ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಹುದ್ದೆ ಇರುತ್ತದೆ. ಇದೇ ಡಿಸೆಂಬರ್ 25, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 25/12/2022
ಸಂಸ್ಥೆ : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು
ಹುದ್ದೆ: ಅಕಾಡೆಮಿಕ್ ಅಸೋಸಿಯೇಟ್
ಒಟ್ಟು ಹುದ್ದೆ : 2
ವೇತನ ಮಾಸಿಕ: ₹ 30,000-36,000
ಸ್ಥಳ : ಬೆಂಗಳೂರು
ವಿದ್ಯಾರ್ಹತೆ : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ: ಶುಲ್ಕ ವಿನಾಯಿತಿ ಇದೆ.
ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ