BIG BREAKING NEWS: ಮುಂದಿನ ವಾರಾಂತ್ಯ ‘ಶಿಕ್ಷಕರ ಅರ್ಹತಾ ಪರೀಕ್ಷೆ’ ಫಲಿತಾಂಶ ಪ್ರಕಟ!

ಕೆಲ ದಿನಗಳ ಹಿಂದಷ್ಟೇ ನಡೆದ ಶಿಕ್ಷಕರ ನೇಮಕಾತಿಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ( Karnataka Teacher Eligibility Test Results ) ಮುಂದಿನ ವಾರ ಪ್ರಕಟವಾಗಲಿದೆ.

ಯಾವುದೇ ಉದ್ಯೋಗವಾದರೂ ಕೂಡ ಅಭ್ಯರ್ಥಿಯ ಅರ್ಹತೆ , ಕೆಲಸದ ಬಗ್ಗೆ ಇರುವ ಜ್ಞಾನವನ್ನು ಪರಿಗಣಿಸಲು ಪರೀಕ್ಷೆಗಳನ್ನು ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತದೆ. ಅದೇ ರೀತಿ, ದಿನಾಂಕ 06-11-2022ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ( Karnataka Teacher Eligibility Test – TET ) ನಡೆಸಲಾಗಿತ್ತು. ಈ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ( Key Answer ) ದಿನಾಂಕ 09-11-2022ರಂದು ಪ್ರಕಟಿಸಲಾಗಿದೆ. ಇದೀಗ ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುತ್ತದೆ.

ಈ ಬಗ್ಗೆ ಅಧಿಕೃತವಾಗಿ ಟ್ವಿಟ್ ( Twitter ) ಮಾಡಿ ತಿಳಿಸಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Education Minister BC Nagesh ) ಅವರು, ಶಿಕ್ಷಕರ ಅರ್ಹತಾ ಪರೀಕ್ಷೆಯ( TET) ಫಲಿತಾಂಶವನ್ನು ಮುಂದಿನ ವಾರಾಂತ್ಯದೊಳಗೆ ಪ್ರಕಟಿಸುವುದಾಗಿ ಘೋಷಿಸಿದ್ದಾರೆ.

Leave A Reply

Your email address will not be published.