ಮಂಗಳೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಹೊಡೆದಾಟ | 10ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ!

Share the Article

ಮಂಗಳೂರು : ನಗರದ ಸುರತ್ಕಲ್ ನಲ್ಲಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಬುಧವಾರ ತಡರಾತ್ರಿ ವದರಿಯಾಗಿದೆ.

ಮುಕ್ಕದ ಪ್ರತಿಷ್ಠಿಯ ಕಾಲೇಜೊಂದರ ಸುಮಾರು 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಯುವಕರು ಮುಕ್ತ ಪರಿಸರದ ಮನೆಯೊಂದರಲ್ಲಿ ವಾಸವಾಗಿದ್ದು, ಹೊಡೆದಾಡಿ ಕೊಂಡಿದ್ದರು ಎನ್ನಲಾಗಿದೆ.

ಹಲ್ಲೆಗೊಳಗಾದ ಓರ್ವ ದೂರು ನೀಡಿರುವ ಪರಿಣಾಮ ಆತನೊಂದಿಗೆ ವಾಸವಾಗಿದ್ದ ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂರ ತಿಳಿದು ಬಂದಿದೆ. ವಿದ್ಯಾರ್ಥಿಗಳೆಲ್ಲರೂ ಕೇರಳ ಮೂಲದವರೆಂದು ತಿಳಿದು ಬಂದಿದೆ.

ಇಷ್ಟು ಮಾತ್ರವಲ್ಲದೇ, ಯುವಕರನ್ನು ವಶಕ್ಕೆ ಪಡೆಯಲು ಬಂದ ಪೊಲೀಸರಿಗೆ ಸ್ಥಳೀಯರು ಕೂಡಾ ಈ ಬಗ್ಗೆ ಮೌಕಿಕವಾಗಿ ದೂರಿದ್ದಾರೆ ಎನ್ನಲಾಗಿದೆ. ತಡರಾತ್ರಿವರೆಗೂ ಜಗಳವಾಡಿಕೊಂಡು ಗದ್ದಲ ಮಾಡುತ್ತಿರುತ್ತಾರೆ. ದಿನಕ್ಕೊಬ್ಬರ ಬರ್ತ್ ಡೇ ಸೇರಿದಂತೆ ವಿವಿಧ ಕಾರಣಗಳನ್ನು ಹೇಳಿಕೊಂಡು ರಸ್ತೆಯ ಮಧ್ಯೆ ಪಟಾಕಿ ಹೊಡೆಯುವುದು ಸೇರಿದಂತೆ ವಿವಿಧ ರೀತಿಯಲ್ಲಿ ಸ್ಥಳೀಯರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ದೂರಲಾಗಿದೆ.

Leave A Reply