ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಭರ್ಜರಿ ಉದ್ಯೋಗವಕಾಶ | ಒಟ್ಟು 596ಹುದ್ದೆಗಳು, ಮಾಸಿಕ ರೂ.1.40ಲಕ್ಷ ವೇತನ
AAI Recruitment 2023: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(Airports Authority of India-AAI)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಹುದ್ದೆಯ ಬಗೆಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಸರ್ಕಾರಿ ಹುದ್ದೆ(Government Job) ಅರಸುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಜನವರಿ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಒಟ್ಟು 596 ಜೂನಿಯರ್ ಎಕ್ಸಿಕ್ಯೂಟಿವ್(Junior Executive) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹಾಗಾಗಿ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಮಿಸ್ ಮಾಡಬಾರದು.
ಸಂಸ್ಥೆ : ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ
ಹುದ್ದೆ : ಜೂನಿಯರ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆ :596
ವೇತನ ಮಾಸಿಕ : ರೂ.40,000-1,40,000
ಉದ್ಯೋಗದ ಸ್ಥಳ : ಭಾರತದಲ್ಲೆಡೆ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 21/01/2023
ಹುದ್ದೆಯ ಮಾಹಿತಿ:
ಜೂನಿಯರ್ ಎಕ್ಸಿಕ್ಯೂಟಿವ್ (ಸಿವಿಲ್)- 62
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್)- 84
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್)- 440
ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್)-10
ವಿದ್ಯಾರ್ಹತೆ:
ಜೂನಿಯರ್ ಎಕ್ಸಿಕ್ಯೂಟಿವ್ (ಸಿವಿಲ್)- ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್)- ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್)- ECEನಲ್ಲಿ ಪದವಿ
ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್)-ಆರ್ಕಿಟೆಕ್ಚರ್ನಲ್ಲಿ & ಪ್ಲ್ಯಾನಿಂಗ್ನಲ್ಲಿ ಪದವಿ
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಜನವರಿ 21, 2023 ಕ್ಕೆ ಗರಿಷ್ಠ 27 ವರ್ಷ ಮೀರಿರಬಾರದು.
ಒಬಿಸಿ(NCL) ಅಭ್ಯರ್ಥಿಗಳು-3 ವರ್ಷಗಳು, ಎಸ್ಸಿ/ಎಸ್ಟಿ ಅಭ್ಯರ್ಥಿಗಳು- 5 ವರ್ಷ,PWD ಅಭ್ಯರ್ಥಿಗಳು-10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ/PWD/ಮಹಿಳಾ ಅಭ್ಯರ್ಥಿಗಳು- ಇಲ್ಲ.
ಉಳಿದ ಎಲ್ಲಾ ಅಭ್ಯರ್ಥಿಗಳು-300 ರೂ. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ : ಗೇಟ್ ಸ್ಕೋರ್, ದಾಖಲಾತಿ ಪರಿಶೀಲನೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ