ಕಾಲೇಜಿನಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಕುಣಿದ ವಿದ್ಯಾರ್ಥಿಗಳು

ಮಂಗಳೂರು : ನಗರದ ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ವೇದಿಕೆ ಮೇಲೆ ಅಸಭ್ಯವಾಗಿ ಕುಣಿದ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಬುರ್ಖಾ, ಹಿಜಾಬ್ ಧರಿಸಿ ಅಸಭ್ಯವಾಗಿ ನರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. ‌

ವಾಮಂಜೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬುಧವಾರ ಕಾರ್ಯಕ್ರಮದ ಬಳಿಕ ಕಾಲೇಜಿನ ವಿದ್ಯಾರ್ಥಿಗಳು ಅಸಭ್ಯವಾಗಿ ನೃತ್ಯ ಮಾಡಿದ್ದಾರೆ. ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರನ್ನು ಅಮಾನತುಗೊಳಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಕಾಲೇಜಿನ ಕಾರ್ಯಕ್ರಮ ಮುಗಿದ ಬಳಿಕ ವಿದ್ಯಾರ್ಥಿಗಳು ವೇದಿಕೆಯಲ್ಲಿ ಈ ನೃತ್ಯ ಮಾಡಿದ್ದು, ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ವಿಚಾರಣೆ ನಡೆಸಲಾಗುತ್ತಿದೆ. ಕಾಲೇಜು ತನ್ನ ಆವರಣದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಹಾಗೂ ಸಮುದಾಯಗಳ ನಡುವೆ ಸೌಹಾರ್ದತೆಗೆ ಧಕ್ಕೆ ತರುವ ಇಂಥಹ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

Leave A Reply

Your email address will not be published.