KPSC : ಮೌಲಾನಾ ಆಜಾದ್ ಶಾಲೆಗಳ ಶಿಕ್ಷಕರ ಹುದ್ದೆಗೆ ಅರ್ಹತಾ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಮೌಲಾನ ಶಿಕ್ಷಕರು ಹುದ್ದೆಗಳ ನೇಮಕಾತಿ ಸಂಬಂಧ ಪಟ್ಟಂತೆ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇಮಕ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ಅರ್ಹತಾ ಪಟ್ಟಿಯನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಚೆಕ್‌ ಮಾಡಬಹುದಾಗಿದೆ.

 

ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್‌ ಮೌಲಾನಾ ಆಜಾದ್ ಶಾಲೆಗಳ ಗಣಿತ, ಇಂಗ್ಲಿಷ್, ಉರ್ದು, ಸಮಾಜ ವಿಜ್ಞಾನ ವಿಷಯಗಳಿಗೆ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ, ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಲಿಸ್ಟ್‌ ಅನ್ನು ಬಿಡುಗಡೆ ಮಾಡಲಾಗಿದೆ. ಹಾಗಾಗಿ, ಅರ್ಹತಾ ಪಟ್ಟಿಯನ್ನು ಪರಿಶೀಲನೆ ಮಾಡಲು ಕೆಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದ್ದು, ಅರ್ಹತಾ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಮಾತ್ರ ನೀಡಲಾಗಿದೆ.

ಸದರಿ ಅರ್ಹತಾ ಪಟ್ಟಿಯಲ್ಲಿ ಹೆಸರು ಇರುವ ಅಭ್ಯರ್ಥಿಗಳಿಗೆ ಮುಂದಿನ ದಿನಗಳಲ್ಲಿ ಕೆಪಿಎಸ್‌ಸಿ ನಿರ್ದಿಷ್ಟ ದಿನಾಂಕವನ್ನು ಅಪ್‌ಡೇಟ್‌ ಮಾಡಲಿದ್ದು ಇಲ್ಲವೇ ಅಭ್ಯರ್ಥಿಗಳ ಅಂಚೆ ವಿಳಾಸಕ್ಕೆ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನಾ ಪತ್ರಗಳನ್ನು ಕಳುಹಿಸಲಾಗುತ್ತದೆ. ಕೆಪಿಎಸ್‌ಸಿ ನಿಗದಿ ಮಾಡಿದ ದಿನಾಂಕದಂದು ಬೆಂಗಳೂರು ಉದ್ಯೋಗ ಸೌಧದಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾಗಿದೆ.

ಇದರ ಜೊತೆಗೆ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಸಿ ಹುದ್ದೆಗಳಿಗೆ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನೂ ಕೂಡ ಬಿಡುಗಡೆ ಮಾಡಲಾಗಿದೆ. ನವೆಂಬರ್ 30, 2022 ರಂದು ಔಷಧ ವಿಶ್ಲೇಷಕರು ಹುದ್ದೆಗೆ ನಡೆಸಿದ ಪರೀಕ್ಷೆಯ ತಾತ್ಕಾಲಿಕ ಸರಿಯುತ್ತರಗಳನ್ನು ಬಿಡುಗಡೆ ಮಾಡಲಾಗಿದೆ.

ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರುಪಡಿಸಬೇಕಾದ ದಾಖಲೆಗಳು ಹೀಗಿವೆ;

ಆಧಾರ್ ಕಾರ್ಡ್‌, ಹುದ್ದೆಗೆ ನಿಗದಿತ ಶೈಕ್ಷಣಿಕ ಅರ್ಹತೆ ಪ್ರಮಾಣ ಪತ್ರ, ಜಾತಿ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು,ಕನ್ನಡ ಮಾಧ್ಯಮ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು, ವಯೋಮಿತಿ ಅರ್ಹತೆ ಪ್ರಮಾಣ ಪತ್ರಕ್ಕೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಕೂಡ ಆಗಲಿದೆ. ಇದರ ಜೊತೆಗೆ ಗ್ರಾಮೀಣ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು, ಮಾಜಿ ಸೈನಿಕರ ಮೀಸಲಾತಿ ಪ್ರಮಾಣ ಪತ್ರಗಳು, ಯೋಜನೆಗಳಿಂದ ನಿರಾಶ್ರಿತ ಅಭ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರ, ಸೇವಾ ನಿರತ ಅಭ್ಯರ್ಥಿಗಳ ಪ್ರಮಾಣ ಪತ್ರ, ಅಂಗವಿಕಲ ಅಭ್ಯರ್ಥಿ ಮೀಸಲಾತಿ ಪ್ರಮಾಣ ಪತ್ರದ ಜೊತೆಗೆ ಸಂಬಂಧಪಟ್ಟ ತಾಲ್ಲೂಕು ತಾಹಶೀಲ್ದಾರ್ ರವರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ ಬೇಕಾಗಿದ್ದು ಇವುಗಳಲ್ಲದೇ 2 ಪಾಸ್ ಪೋರ್ಟ್‌ ಅಳತೆಯ ಭಾವಚಿತ್ರ ಬೇಕಾಗುತ್ತದೆ.

ಪ್ರಮಾಣ ಪತ್ರಗಳ ಪೈಕಿ ಮೀಸಲಾತಿಗೆ ಅವಶ್ಯವಿರುವ ಎಲ್ಲ ದಾಖಲೆಗಳನ್ನು ಹಾಜರು ಪಡಿಸಬೇಕಾಗಿದ್ದು, ಅಭ್ಯರ್ಥಿಗಳು ಮೇಲ್ಕಂಡ ಎಲ್ಲಾ ಮೂಲ ದಾಖಲೆಗಳ 2 ಸೆಟ್ ಜೆರಾಕ್ಸ್‌ ಪ್ರತಿಗಳನ್ನು ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಸಲ್ಲಿಸಬೇಕಾಗುತ್ತದೆ.


Leave A Reply

Your email address will not be published.