Kantara : ‘ಕಾಂತಾರ ಭಾಗ -2’ಗೆ ಪಂಜುರ್ಲಿಯ ಅಪ್ಪಣೆ ಕೇಳಿದ ಚಿತ್ರತಂಡ | ರಿಷಬ್ ಶೆಟ್ಟಿಗೆ ಎಚ್ಚರಿಕೆ ನೀಡಿದ ದೈವ!

Share the Article

‘ಕಾಂತಾರ’ ಸಿನಿಮಾದ ಯಶಸ್ಸು ನಿಜಕ್ಕೂ ಸ್ಯಾಂಡಲ್ ವುಡ್ ನ ಗರಿಮೆಯನ್ನು ಹೆಚ್ಚಿಸಿದೆ ಎಂದೇ ಹೇಳಬಹುದು. ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ಮೂಡಿ ಬಂದ ಈ ಸಿನಿಮಾ ಜಗತ್ತಿನಾದ್ಯಂತ ಖ್ಯಾತಿ ಪಡೆಯಿತು. ಕೇವಲ ಸುಮಾರು ಹದಿನೈದು ಕೋಟಿಯಲ್ಲಿ ನಿರ್ಮಿಸಿದ ಸಿನಿಮಾ 400 ಕೋಟಿಗೂ ಹೆಚ್ಚು ಹಣವನ್ನು ಕಲೆಕ್ಷನ್ ಮಾಡಿದ್ದು ನಿಜಕ್ಕೂ ಎಲ್ಲಾ ಚಿತ್ರರಂಗ ತಿರುಗಿ ಒಮ್ಮೆ ನೋಡುವಂತೆ ಮಾಡಿದೆ.

ಇಷ್ಟೆಲ್ಲ ಪರಿಶ್ರಮದ ಪಟ್ಟ ಚಿತ್ರತಂಡದ ಜೊತೆಗೆ ದೈವದ ಆಶೀರ್ವಾದವೂ ಕಾರಣ ಎನ್ನಲಾಗುತ್ತಿದೆ.

ದೈವವನ್ನು ನಂಬುವ ರಿಷಬ್ ಶೆಟ್ಟಿ, ದೈವದ ಬಗ್ಗೆ ಸಿನಿಮಾ ಮಾಡುವಾಗ ನೇಮ, ನಿಷ್ಠೆಗಳಿಂದ ಮಾಡಿದ್ದು, ಅಪಚಾರವಾಗದಂತೆ ನಡೆದುಕೊಂಡಿದ್ದರಿಂದಲೇ ದೈವದ ಆಶೀರ್ವಾದ ಸಿನಿಮಾಕ್ಕೆ ದೊರಕಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೀಗ ‘ಕಾಂತಾರ 2’ ಸಿನಿಮಾದ ಮಾತುಕತೆ ಶುರುವಾಗಿದ್ದು, ‘ಕಾಂತಾರ 2’ ಸಿನಿಮಾ ಮಾಡಬಹುದೇ ಎಂದು ಸ್ವತಃ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ಚಿತ್ರತಂಡದವರು ದೈವದ ಅನುಮತಿಯನ್ನು ಕೇಳಿದ್ದಾರೆ. ಈ ಸಂದರ್ಭದಲ್ಲಿ ದೈವವು ಕೆಲವು ಎಚ್ಚರಿಕೆಗಳನ್ನು ಚಿತ್ರತಂಡಕ್ಕೆ ನೀಡಿದೆ.

ಮಂಗಳೂರು ನಗರದ ಹೊರವಲಯದ ಬಂದಲೆಯ ಮನೆಯಲ್ಲಿ ನಡೆದ ಪಂಜುರ್ಲಿ ಕೋಲದಲ್ಲಿ ಕಾಂತಾರ ಚಿತ್ರತಂಡ ಭಾಗವಹಿಸಿದ್ದು, ಕದ್ರಿ ಮಂಜುನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಅಡಿಗ ಅವರ ಸಮ್ಮುಖದಲ್ಲಿ ನಡೆದ ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ದೈವದ ಬಳಿ ರಿಷಬ್ ಶೆಟ್ಟಿ ದೈವದ ಬಳಿ ಕಾಂತಾರಾ ಭಾಗ ಎರಡು ನಿರ್ಮಾಣಕ್ಕೆ ಅನುಮತಿ ಕೇಳಿದ್ದಾರೆ. ಈ ಸಂದರ್ಭದಲ್ಲಿ ಸಿನಿಮಾದ ನಿರ್ದೇಶಕ, ನಟ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು ಸೇರಿದಂತೆ ಇನ್ನು ಕೆಲವರು ಹಾಜರಿದ್ದರು ಎಂದು ಮಾಧ್ಯಮವೊಂದು ವರದಿ‌ ಮಾಡಿದೆ.

ದೈವವು ‘ಕಾಂತಾರ’ ಭಾಗ 2 ಸಿನಿಮಾ ಮಾಡಲು ಅನುಮತಿಯನ್ನು ನೀಡಿದೆ. ಆದರೆ ಕೆಲವು ಷರತ್ತುಗಳ ಜೊತೆಗೆ ಎಚ್ಚರಿಕೆಯನ್ನು ಕೂಡಾ ದೈವ ನೀಡಿದೆ. ‘ಕಾಂತಾರ’ ಚಿತ್ರತಂಡಕ್ಕೆ ಅಭಯ ನೀಡಿರುವ ಅಣ್ಣಪ್ಪ ಪಂಜುರ್ಲಿ ‘ಮೊದಲು ಚಿತ್ರ ಮಾಡೋವಾಗ ಹತ್ತು ಬಾರಿ ಯೋಚನೆ ಮಾಡಿದ್ದೀರಿ, ಈ ಬಾರಿ ಮಾತ್ರ ನೂರು ಬಾರಿ ಯೋಚನೆ ಮಾಡಿ. ಮಾಡಿದ ಪ್ರಯತ್ನಕ್ಕೆ ಯಾವತ್ತೂ ಜಯ ಸಿಗುವ ರೀತಿ ಮಾಡುತ್ತೇನೆ. ಈ ಹಿಂದೆ ಇದ್ದ ತಂಡದ ಜೊತೆಗೆ, ಅಷ್ಟೇ ಶುದ್ಧಾಚಾರದಲ್ಲಿ ಮುಂದುವರಿಯಿರಿ’ ಅಂತಾ ದೈವ ಅಣ್ಣಪ್ಪ ಪಂಜುರ್ಲಿ ಕಾಂತಾರ ಚಿತ್ರತಂಡಕ್ಕೆ ಅಭಯ ನೀಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಇತ್ತ ರಿಷಬ್ ಶೆಟ್ಟಿ ದೈವದಿಂದ ಅನುಮತಿ ದೊರೆತೊಡನೆ ಸಿನಿಮಾ ನಿರ್ಮಾಣಕ್ಕೆ ಈಗಾಗಲೇ ಮಾಡಿಕೊಂಡಿದ್ದ ಯೋಜನೆಯನ್ನು ಮಾಡಿಕೊಂಡಿದ್ದು, ಚಿತ್ರದಲ್ಲಿ ನಟಿಸುವ ಕೆಲವರಿಗೆ ಉದ್ದ ಕೂದಲು ಬಿಡಲು ಹೇಳಿದ್ದಾರಂತೆ. ಮುಂದಿನ ಮಳೆಗಾಲದ ಸಮಯದಲ್ಲಿ ಕಾಂತಾರಾ 2 ಚಿತ್ರದ ಚಿತ್ರೀಕರಣವಾಗುವ ಎಲ್ಲಾ ಸಂಭವಗಳಿವೆ. ‘ಕಾಂತಾರ’ ಸಿನಿಮಾದಲ್ಲಿ ನಟಿಸಿರುವ ಬಹುತೇಕ ಕಲಾವಿದರು ‘ಕಾಂತಾರ 2 ಸಿನಿಮಾದಲ್ಲಿಯೂ ನಟಿಸುವ ಸಾಧ್ಯತೆ ಇದೆ.

Leave A Reply

Your email address will not be published.