ಬಿಎಡ್‌, ಡಿಎಡ್‌ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌

2022-23ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ಸಹಾಯಕ್ಕೆ ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು. ಸದ್ಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮುಂದೂಡಲಾಗಿದೆ. ವಿದ್ಯಾರ್ಥಿಗಳ ಮನವಿ ಮೇರೆಯ ಆಧಾರದಲ್ಲಿ ಅಂದರೆ ಸರ್ವರ್ ಸಮಸ್ಯೆಯಿಂದ ಹಲವಾರು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅಸಾಧ್ಯ ಆದ ಕಾರಣ ಮತ್ತು ಅರ್ಹವಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಈ ಸೌಲಭ್ಯ ಪಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈಗಾಗಲೇ 2022-23ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 10-12-2022 ರವರೆಗೆ ಅವಕಾಶ ನೀಡಲಾಗಿತ್ತು. ಈಗ ಈ ದಿನಾಂಕವನ್ನು 31-12-2022 ರವರೆಗೆ ವಿಸ್ತರಿಸಲಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 10-12-2022 ರವರೆಗೆ ಅವಕಾಶ ನೀಡಲಾಗಿತ್ತು. ಆದರೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾನ್ಯ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ, ಸಹಾಯವಾಣಿಗೆ ಕರೆಯ ಮೂಲಕ ಮತ್ತು ಟ್ವಿಟ್ಟರ್‌ನಲ್ಲಿ ಮನವಿಯನ್ನು ಸಲ್ಲಿಸಿರುವ ಕಾರಣ ಹಾಗೂ ಇನ್ನೂ ಕೆಲವು ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿರುವುದರಿಂದ, ಅರ್ಜಿ ಸಲ್ಲಿಸುವ ದಿನಾಂಕವನ್ನು 31-12-2022 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಅಲ್ಲದೆ ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ, ಮುಸ್ಲಿಂ , ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಪ್ರೋತ್ಸಾಹ ಧನಕ್ಕೆ ಅಭ್ಯರ್ಥಿಗಳು ಸೇವಾ ಸಿಂಧು https://sevasindhu.karnataka.gov.in/ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಬಿ.ಎಡ್‌ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಯಿಂದ ಮಾನ್ಯತೆ ಪಡೆದಿರುವ ಡಿ.ಎಡ್ ಕೋರ್ಸ್‌ಗಳನ್ನು ಸರ್ಕಾರಿ/ ಅರೆ ಸರ್ಕಾರಿ / ಅನುದಾನಿತ ಹಾಗು ಖಾಸಗಿ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ರೂ.25,000 ಗಳ ವಿಶೇಷ ಪ್ರೋತ್ಸಾಹಧನವನ್ನು ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ಆನ್‌ಲೈನ್‌ ಮುಖಾಂತರ ಜಮಾ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆ :

  • ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಕೋರ್ಸ್‌ಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷದಂತೆ ಗರಿಷ್ಠ ಎರಡು ವರ್ಷದವರೆಗೆ ಅನುದಾನ ನೀಡಲಾಗುತ್ತದೆ.
  • ಪೋಷಕರ ವರಮಾನ ಗರಿಷ್ಠ ಆರು ಲಕ್ಷ ರೂ. ಗಿಂತ ಹೆಚ್ಚಿಗೆ ಇರಬಾರದು.
  • ಪ್ರೋತ್ಸಾಹಧನಕ್ಕೆ ಅಭ್ಯರ್ಥಿಗಳನ್ನು ಅರ್ಹತೆ ಪರೀಕ್ಷೆ ಹಾಗೂ ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್‌ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
  • ಅರ್ಜಿ ಸಲ್ಲಿಸಲು ಕನಿಷ್ಠ 50 ಅಂಕ ಪಡೆದಿರಬೇಕು.
  • ಒಂದು ವೇಳೆ ಅಭ್ಯರ್ಥಿಗಳು ಸುಳ್ಳು ಮಾಹಿತಿ ಒದಗಿಸಿದರೆ ಹಾಗು ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದರೆ ಅಂಥವರಿಂದ ಪ್ರೋತ್ಸಾಹ ಧನ ವಾಪಸ್ ಪಡೆಯಲಾಗುವುದು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖಾ ಸಹಾಯವಾಣಿ ಸಂಖ್ಯೆ 8277799990 ಅಥವಾ ಇಲಾಖಾ ವೆಬ್‌ಸೈಟ್‌ https://dom.karnataka.gov.in/ ಗೆ ಭೇಟಿ ನೀಡಬಹುದಾಗಿದೆ.

ಅರ್ಹ ವಿದ್ಯಾರ್ಥಿಗಳು ಈ ಮೇಲಿನ ಪ್ರೋತ್ಸಾಹ ಧನವನ್ನು ಅಗತ್ಯ ದಾಖಲೆಗಳೊಂದಿದೆ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ.

Leave A Reply

Your email address will not be published.