PGCIL Recruitment 2022: ಡಿಪ್ಲೊಮಾ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ | ಮಾಸಿಕ 1.17 ಲಕ್ಷ ಸಂಬಳದ ಉದ್ಯೋಗ
PGCIL Recruitment 2022: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (Power Grid Corporation of India Limited -PGCIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 31, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 31/12/2022
ಲಿಖಿತ ಪರೀಕ್ಷೆ ನಡೆಯುವ ದಿನಾಂಕ: ಫೆಬ್ರವರಿ 2023
ಸಂಸ್ಥೆ : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ಹುದ್ದೆ : ಡಿಪ್ಲೊಮಾ ಟ್ರೇನಿ
ಒಟ್ಟು ಹುದ್ದೆ : 211
ವೇತನ ಮಾಸಿಕ : ₹25,000-1,17,500
ಉದ್ಯೋಗದ ಸ್ಥಳ : ಭಾರತದಲ್ಲಿ ಎಲ್ಲಿ ಬೇಕಾದರೂ
ಹುದ್ದೆಯ ಮಾಹಿತಿ:
ಎಲೆಕ್ಟ್ರಿಕಲ್ (EE)- 177
ಎಲೆಕ್ಟ್ರಾನಿಕ್ಸ್ (EC)-11
ಸಿವಿಲ್ (CE)-23
ಶೈಕ್ಷಣಿಕ ಅರ್ಹತೆ ಏನಿರಬೇಕು?
ಎಲೆಕ್ಟ್ರಿಕಲ್ (EE)- ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ (ಪವರ್)/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಪವರ್ ಸಿಸ್ಟಮ್ ಎಂಜಿನಿಯರಿಂಗ್/ಪವರ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಎಲೆಕ್ಟ್ರಾನಿಕ್ಸ್ (EC)-ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ & ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ ಕಮ್ಯುನಿಕೇಷನ್/ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಸಿವಿಲ್ (CE)-ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ವಯೋಮಿತಿ: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 31, 2022ಕ್ಕೆ ಗರಿಷ್ಠ 27 ವರ್ಷ ಮೀರಿರಬಾರದು.
ಒಬಿಸಿ(NCL) ಅಭ್ಯರ್ಥಿಗಳು- 3 ವರ್ಷ, SC/ST ಅಭ್ಯರ್ಥಿಗಳು -5 ವರ್ಷ, PWD ಅಭ್ಯರ್ಥಿಗಳು- 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ:
SC/ST/PWD/Ex-SM ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ. ಉಳಿದ ಎಲ್ಲಾ ಅಭ್ಯರ್ಥಿಗಳಿಗೆ- 300 ರೂ.
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭುರ್ಥಿಗಳನ್ನು ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ