ಶಿವಮೊಗ್ಗ : ಕಾರು ಲಾರಿ ನಡುವೆ ಭೀಕರ ಅಪಘಾತ | ಕಾರಿನಲ್ಲಿದ್ದ ಯುವಕರು ಸ್ಥಳದಲ್ಲೇ ಸಾವು

Share the Article

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿವಮೊಗ್ಗ ತಾಲೂಕಿನ ಕಲ್ಲಾಪುರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯುವಕರು ದಾವಣಗೆರೆ ಮೂಲದವರಾಗಿದ್ದು, ವಿವೇಕ್ (21), ಕಾರ್ತಿಕ್ (21), ಮೋಹನ್ (21) ಮೃತ ಯುವಕರು, ರುದ್ರೇಶ್ ಎಂಬ ಯುವಕನಿಗೆ ಗಂಭೀರ ಗಾಯವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಲಾರಿ ಚಾಲಕನ್ನು ವಶಕ್ಕೆ ಪಡೆದಿದ್ದು, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply