ಬೆಳ್ತಂಗಡಿ : ಕಾಡಿದ ತೀವ್ರ ಜ್ವರ | ಆಸ್ಪತ್ರೆಗೆ ದಾಖಲಾದ ಯುವತಿ ಸಾವು!!!

Share the Article

ಬೆಳ್ತಂಗಡಿ: ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆಯೊಂದು ವರದಿಯಾಗಿದೆ.

ಮೃತ ಯುವತಿಯನ್ನು ತಾಲೂಕಿನ ತೆಂಕಕಾರಂದೂರು ಗ್ರಾಮದ ಸಿಂಗ ಎಂಬವರ ಪುತ್ರಿ ಪವಿತ್ರ(22) ಎಂದು ಗುರುತಿಸಲಾಗಿದೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಪವಿತ್ರಾಳನ್ನು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು ಎಂದು ತಿಳಿದುಬಂದಿದೆ.

Leave A Reply