1045 ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
JKSSB Recruitment 2022: ಜಮ್ಮು & ಕಾಶ್ಮೀರ ಸರ್ವೀಸಸ್ ಸೆಲೆಕ್ಷನ್ ಬೋರ್ಡ್(Jammu and Kashmir Services Selection Board) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಯ ಬಗೆಗಿನ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಒಟ್ಟು 1045 ಜೂನಿಯರ್ ಎಂಜಿನಿಯರ್(Junior Engineer) ಹುದ್ದೆಗಳು ಖಾಲಿ ಇವೆ. ಡಿಸೆಂಬರ್ 20, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.
ಉದ್ಯೋಗದ ಸ್ಥಳ ಜಮ್ಮು & ಕಾಶ್ಮೀರ ಸರ್ವೀಸಸ್ ಸೆಲೆಕ್ಷನ್ ಬೋರ್ಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಸಂಸ್ಥೆ : ಜಮ್ಮು & ಕಾಶ್ಮೀರ ಸರ್ವೀಸಸ್ ಸೆಲೆಕ್ಷನ್ ಬೋರ್ಡ್
ಹುದ್ದೆ : ಜೂನಿಯರ್ ಎಂಜಿನಿಯರ್
ಒಟ್ಟು ಹುದ್ದೆ : 1045
ವೇತನ ಮಾಸಿಕ : ₹35,400-1,12,400
ಉದ್ಯೋಗದ ಸ್ಥಳ : ಶ್ರೀನಗರ
ಅರ್ಜಿ ಸಲ್ಲಿಸಲು ಕೊನೆ ದಿನ : 20/12/2022
ಅಧಿಕೃತ ವೆಬ್ಸೈಟ್ : jkssb.nic.in
ವಿದ್ಯಾರ್ಹತೆ: ಜಮ್ಮು & ಕಾಶ್ಮೀರ ಸರ್ವೀಸಸ್ ಸೆಲೆಕ್ಷನ್ ಬೋರ್ಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವೇತನ: ಜಮ್ಮು & ಕಾಶ್ಮೀರ ಸರ್ವೀಸಸ್ ಸೆಲೆಕ್ಷನ್ ಬೋರ್ಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 35,400-1,12,400 ವೇತನ ನೀಡಲಾಗುತ್ತದೆ.