Sabarimala: ಶಬರಿಮಲೆಗೆ ಹೋಗೋ ಭಕ್ತರೇ ಇತ್ತ ಗಮನಿಸಿ | ಅಯ್ಯಪ್ಪಸ್ವಾಮಿ ದರ್ಶನಕ್ಕೆ ಹೊಸ ರೂಲ್ಸ್!
ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಕೆಲವು ದಿನಗಳ ಹಿಂದಷ್ಟೇ ಅಯ್ಯಪ್ಪ ಸ್ವಾಮಿ ದೇವಸ್ಥಾನ ಎರಡು ತಿಂಗಳ ಮಟ್ಟಿಗೆ ಭಕ್ತಾದಿಗಳ ದರ್ಶನಕ್ಕೆ ತೆರೆದಿದ್ದು ಶಬರಿಮಲೆ ಯಾತ್ರೆಗೆ ಚಾಲನೆ ಸಹ ನೀಡಲಾಗಿದೆ. ಶಬರಿಮಲೆಯ ಶ್ರೀ ಅಯ್ಯಪ್ಪ ದೇವಸ್ಥಾನ ದೇಶದ ಅತ್ಯಂತ ಪ್ರಾಚೀನ ಮತ್ತು ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ. ರಾಜ್ಯದಿಂದಲೂ ಲಕ್ಷಾಂತರ ಜನರು ದೇಗುಲಕ್ಕೆ ಭೇಟಿ ನೀಡುತ್ತಾರೆ ಇದು ನಮಗೆ ತಿಳಿದಿರುವ ವಿಚಾರ.
ಸದ್ಯ ಶಬರಿಮಲೆ ದೇವಸ್ಥಾನದ ಆಡಳಿತ ಮಂಡಳಿ ಪ್ರಕಾರ ಪ್ರಸ್ತುತ ಶಬರಿಮಲೆ ಯಾತ್ರೆಗೆ ಚಾಲನೆ ಸಿಗುತ್ತಿದ್ದಂತೆಯೇ ಅಲ್ಲಿ ಜನಸಾಗರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ದರ್ಶನದ ನಿಯಮಾವಳಿಯನ್ನು ಬದಲಾಯಿಸಲು ನಿರ್ಧರಿಸಿದೆ.
ಅದಲ್ಲದೆ ಧಾರ್ಮಿಕ ಆಚರಣೆಗಳು ಜನವರಿ 14ಕ್ಕೆ ಮುಗಿಯುತ್ತವೆ. ಅಂದು ‘ಮಕರ ವಿಳಕ್ಕು’ (ಆಕಾಶದಲ್ಲಿ ಬೆಳಕು) ಮಕರ ಜ್ಯೋತಿ ಯು ಸೂರ್ಯಾಸ್ತದ ನಂತರ ಮೂರು ಬಾರಿ ದಿಗಂತದಲ್ಲಿ ಕಾಣಿಸಿಕೊಳ್ಳುತ್ತದೆ. ಆ ಸಮಯದಲ್ಲಿ ಮಕರ ಬೆಳಕಿನ ಜತೆ ಬೆಟ್ಟದ ತುದಿಯಲ್ಲಿ ‘ಸ್ವಾಮಿಯೇ ಶರಣಂ ಅಯ್ಯಪ್ಪ’ ನಿನಾದ ಪ್ರತಿಧ್ವನಿಸುತ್ತದೆ. ಸದ್ಯ ಮಕರ ಸಂಕ್ರಾಂತಿ ಸಮೀಪಿಸುತ್ತಿದ್ದು, ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ. ಈ ಹಿನ್ನೆಲೆ ಕೇರಳ ಸರ್ಕಾರ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ.
ಈಗಾಗಲೇ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಭಕ್ತರು ಶಬರಿಮಲೆಗೆ ತೆರಳಿ ದೇವರ ದರ್ಶನ ಪಡೆಯುತ್ತಿದ್ದಾರೆ. ದಿನದಿಂದ ದಿನಕ್ಕೆ ಭಕ್ತರ ದಂಡು ಕೂಡ ಹರಿದು ಬರ್ತಿದೆ.
ಪ್ರಸ್ತುತ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ದಿನಕ್ಕೆ 90 ಸಾವಿರ ಮಂದಿ ಭಕ್ತರಿಗಷ್ಟೇ ದೇವರ ದರ್ಶನಕ್ಕೆ ಅವಕಾಶ ನೀಡಲು ಕೇರಳ ಸರ್ಕಾರ ನಿರ್ಧಾರ ಮಾಡಿದೆ. ಕೇರಳ ಹೈಕೋರ್ಟ್ ನಿರ್ದೇಶನ ನೀಡಿದ ಬಳಿಕ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ.
ಹಾಗೂ ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ದೇವರ ದರ್ಶನ ಸಮಯವನ್ನು 1 ಗಂಟೆ ವಿಸ್ತರಿಸಲಾಗಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಭಕ್ತರ ಸಂದಣಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿ ಎಂದು ಕೇರಳ ಹೈಕೋರ್ಟ್ ಭಾನುವಾರ ಪತ್ತನಂತ್ತಿಟ್ಟ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಲಾಗಿದ್ದು ಮತ್ತು ಭಕ್ತರು ಈ ನಿಯಮಾವಳಿಗಳನ್ನು ಪಾಲಿಸುವಂತೆ ಪ್ರಕಟಣೆ ನೀಡಲಾಗಿದೆ.