Andrew Flintoff: ಭೀಕರ ರಸ್ತೆ ಅಪಘಾತ | ಇಂಗ್ಲೆಂಡ್​ ಮಾಜಿ ನಾಯಕ ಫ್ಲಿಂಟಾಫ್ ಆಸ್ಪತ್ರೆಗೆ ದಾಖಲು

ಇಂಗ್ಲೆಂಡ್ ತಂಡದ ಮಾಜಿ ಆಲ್‌ರೌಂಡರ್ ಮತ್ತು ನಾಯಕ ಆಂಡ್ರ್ಯೂ ಫ್ಲಿಂಟಾಫ್ (Andrew Flintoff) ಚಿತ್ರೀಕರಣದ ವೇಳೆ ಕಾರು ಅಪಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಬಿಸಿ ಶೋ ಟಾಪ್ ಗೇರ್‌ನ (BBC Top Gear) ಸಂಚಿಕೆಯ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ. ಸರ್ರೆಯ ಡನ್ಸ್‌ಫೋಲ್ಡ್ ಪಾರ್ಕ್ ಏರೋಡ್ರೋಮ್‌ನಲ್ಲಿ ಸೋಮವಾರ ಈ ಅವಘಡ ಸಂಭವಿಸಿದೆ. ಆದರೆ, ಆಂಗ್ಲ ಮಾಧ್ಯಮಗಳು ವರದಿ ಮಾಡಿದಂತೆ ಫ್ಲಿಂಟಾಫ್ ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ತಿಳಿದುಬಂದಿದೆ.

 

ಫ್ಲಿಂಟಾಫ್ 2019ರಲ್ಲಿ ಪ್ರಖ್ಯಾತ ಬಿಬಿಸಿ ಕ್ರೀಡಾ ಕಾರ್ಯಕ್ರಮ ಟಾಪ್ ಗೇರ್ ಅನ್ನು ಹೋಸ್ಟ್ ಮಾಡುತ್ತಿದ್ದಾರೆ. ಇದೇ ರೀತಿ ಕಾರ್ಯಕ್ರಮದ ಚಿತ್ರೀಕರಣದ ವೇಳೆ ಫ್ಲಿಂಟಾಫ್ ಟೆಸ್ಟ್ ಟ್ರ್ಯಾಕ್‌ನಲ್ಲಿ ಅಪಘಾತಕ್ಕೆ ಒಳಗಾಗಿದ್ದಾರೆ. ತಕ್ಷಣ ಸಿಬ್ಬಂದಿಗಳು ಮತ್ತು ವೈದ್ಯರು ಅವರನ್ನು ಆಸ್ಪತ್ರೆಗೆ ದಾಖಲಸಿಇದ್ದು, ಚಿಕಿತ್ಸೆ ನಡೆಯುತ್ತಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಬಿಬಿಸಿ ಸಂಸ್ಥೆ, ‘ಇಂದು ಬೆಳಿಗ್ಗೆ ಟಾಪ್ ಗೇರ್ ಪರೀಕ್ಷಾ ಟ್ರ್ಯಾಕ್‌ನಲ್ಲಿ ಫ್ಲಿಂಟಾಫ್ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಸಿಬ್ಬಂದಿಗಳು ಹಾಗೂ ವೈದ್ಯರು ತಕ್ಷಣ ಘಟನಾ ಸ್ಥಳಕ್ಕೆ ಹಾಜರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಮತ್ತು ಸರಿಯಾದ ಸಮಯದಲ್ಲಿ ಅವರಿಗೆ ಚಿಕಿತ್ಸೆಯನ್ನೂ ನೀಡಲಾಗಿದೆ. ಈ ಕುರಿತ ಹೆಚ್ಚಿನ ವಿವರಗಳನ್ನು ನಾವು ಖಚಿತಪಡಿಸುತ್ತೇವೆ‘ ಎಂದು ತಿಳಿಸಿದೆ.

Leave A Reply

Your email address will not be published.