Karnataka TET Exam 2022 : ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022’ರ ಫಲಿತಾಂಶ ಪ್ರಕಟ

2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2022) ರ ಪರೀಕ್ಷೆಯ ಫಲಿತಾಂಶವನ್ನು ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುವುದು. ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಅಂದಹಾಗೇ ದಿನಾಂಕ 06-11-2022ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ಪತ್ರಿಕೆ-1ಕ್ಕೆ 1,40,790 ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 20070 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ.

ಇನ್ನೂ ಪತ್ರಿಕೆ 2ಕ್ಕೆ 1,92,066 ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 41,857 ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಪತ್ರಿಕೆ-1 ಮತ್ತು ಪತ್ರಿಕೆ-2ರಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 3,32,856 ಅಭ್ಯರ್ಥಿಗಳಲ್ಲಿ 61,297 ಅಭ್ಯರ್ಥಿಗಳು ಅರ್ಹತೆಯನ್ನು ಪಡೆದಿದ್ದಾರೆ.

ಫಲಿತಾಂಶ ಚೆಕ್ ಮಾಡುವ ವಿಧಾನ

ಶಿಕ್ಷಣ ಇಲಾಖೆಯ http://www.schooleducation.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಿ.

ತೆರೆದ ಹೋಮ್ ಪೇಜ್‌ನಲ್ಲಿ ‘KARTET-2022 Results’ ಎಂಬಲ್ಲಿ ಕ್ಲಿಕ್ ಮಾಡಿ.

ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿಯನ್ನು ನೀಡಿ ‘Submit’ ಎಂಬಲ್ಲಿ ಕ್ಲಿಕ್ ಮಾಡಿರಿ.

ಪರೀಕ್ಷಾ ಫಲಿತಾಂಶ ಸಿಗುತ್ತದೆ. ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ

Leave A Reply

Your email address will not be published.