ಪಿಯುಸಿ ಪಾಸಾದವರಿಗೆ ಕೇಂದ್ರ ಸರಕಾರಿ ಉದ್ಯೋಗ | ಅಂಚೆಕಚೇರಿ, ಡಾಟಾ ಎಂಟ್ರಿ ಸಹಾಯಕ ಹುದ್ದೆ | ಮಾಸಿಕ ವೇತನ ರೂ.92,000

Staff Selection Commission Recruitment 2022: ಸಿಬ್ಬಂದಿ ನೇಮಕಾತಿ ಆಯೋಗ(Staff Selection Commission-SSC)ವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಜನವರಿ 4, 2023 ಕೊನೆಯ ದಿನಾಂಕವಾಗಿದೆ. ಆಸಕ್ತರು ಕೂಡಲೇ ಅರ್ಜಿ ಹಾಕಿ.

ಸಂಸ್ಥೆ : ಸಿಬ್ಬಂದಿ ನೇಮಕಾತಿ ಆಯೋಗ
ಹುದ್ದೆ : ಅಂಚೆ ಕಚೇರಿ & ಡೇಟಾ ಎಂಟ್ರಿ ಸಹಾಯಕ
ಒಟ್ಟು ಹುದ್ದೆ : 4500
ವೇತನ ಮಾಸಿಕ : ₹ 29,200- 92,300
ವಿದ್ಯಾರ್ಹತೆ : ಪಿಯುಸಿ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನ: 04/01/2023
ಪರೀಕ್ಷೆ ನಡೆಯುವ ತಿಂಗಳು: ಮಾರ್ಚ್​ 2023
ಪರೀಕ್ಷಾ ಕೇಂದ್ರಗಳು: ಮಂಗಳೂರು, ಉಡುಪಿ, ಮೈಸೂರು, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಗುಲ್ಬರ್ಗಾ ಮತ್ತು ಶಿವಮೊಗ್ಗದಲ್ಲಿ ಪರೀಕ್ಷೆ ನಡೆಯಲಿದೆ.

ವಿದ್ಯಾರ್ಹತೆ: ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ ಪಾಸಾಗಿರಬೇಕು.
ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳು-18-27 ವರ್ಷ
ಒಬಿಸಿ ಅಭ್ಯರ್ಥಿಗಳು- 18-30 ವರ್ಷ
SC/ST ಅಭ್ಯರ್ಥಿಗಳು- 18- 32 ವರ್ಷ
PH ಅಭ್ಯರ್ಥಿಗಳು-18-40 ವರ್ಷ

ವೇತನ : ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 29,200- 92,300 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 100ರೂ. ಅರ್ಜಿ ಶುಲ್ಕ ಪಾವತಿಸಬೇಕು.
SC/ST/PH ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

Leave A Reply

Your email address will not be published.