Realme 10 Pro+: ಮಾರುಕಟ್ಟೆಯಲ್ಲಿ ಭರ್ಜರಿ ಸೇಲ್‌ ಕಾಣುತ್ತಿರುವ 108MP ಕ್ಯಾಮೆರಾದ ರಿಯಲ್ ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ | ಇದರ ಬೆಲೆ ಇನ್ನಿತರ ಮಾಹಿತಿಗಳು ಇಲ್ಲಿದೆ

ದಿನೇ ದಿನೇ ಸ್ಮಾರ್ಟ್ ಫೋನ್ ಹವಾ ಹೆಚ್ಚುತ್ತಿದೆ. ಪ್ರಸ್ತುತ ಮೊಬೈಲ್ ಬಳಕೆದಾರರು ಯಾವಾಗ ಹೊಸ ಸ್ಮಾರ್ಟ್​ಫೋನ್​ಗಳು ರಿಲೀಸ್​ ಆಗುತ್ತದೆ ಎಂದು ಕಾಯುತ್ತಿರುತ್ತಾರೆ. ಕಂಪನಿಗಳು ಹೊಸ ಹೊಸ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುತ್ತಿದೆ. ಮೊಬೈಲ್​ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಹೊಸ ಸ್ಮಾರ್ಟ್​ಫೊನ್​ಗಳು ಬರುತ್ತಲೇ ಇದೆ. ಇದೀಗ ರಿಯಲ್‌ ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ ಮೊದಲ ಸೇಲ್ ಆಗುತ್ತಿದೆ.

ಈಗಾಗಲೇ ಭಾರತದಲ್ಲಿ ರಿಯಲ್‌ಮಿ 10 ಪ್ರೊ ಸರಣಿಯ (Realme 10 5G) ಸ್ಮಾರ್ಟ್‌ಫೋನ್​ಗಳನ್ನು ಪರಿಚಯಿಸಿತ್ತು . ಈ ಸರಣಿಯಲ್ಲಿ ರಿಯಲ್‌ ಮಿ 10 ಪ್ರೊ 5G ಮತ್ತು ರಿಯಲ್‌ ಮಿ 10 ಪ್ರೊ + 5G ಎಂಬ ಎರಡು ಮೊಬೈಲ್ ಇದೆ. ಈ ಎರಡೂ ಸ್ಮಾರ್ಟ್​ಫೋನ್​ಗಳಲ್ಲಿ ಅತ್ಯಂತ ಬಲಿಷ್ಠವದ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ ನೀಡಲಾಗಿದೆ. ಈ ಸರಣಿಯಲ್ಲಿನ ರಿಯಲ್‌ ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ ಮೊದಲ ಸೇಲ್ ಕಾಣುತ್ತಿದೆ.

ರಿಯಲ್‌ ಮಿ 10ಪ್ರೊ + 5 ವಿಶೇಷತೆ :

  • ರಿಯಲ್‌ ಮಿ 10ಪ್ರೊ + 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಕರ್ವ್ಡ್‌ ಅಮೋಲೆಡ್‌ ಡಿಸ್‌ ಪ್ಲೇ ಹೊಂದಿದೆ.
  • ಇದು 120Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 1080 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
  • ಇದಕ್ಕೆ ಪೂರಕವಾಗಿ G68 GPU ಸಪೋರ್ಟ್‌ ಪಡೆದಿದೆ.
  • ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.
  • ಇದರಲ್ಲಿ ಕೂಡ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್‌ ಅನ್ನು ಹೊಂದಿದೆ.
  • ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
  • 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W SuperVOOC ಚಾರ್ಜಿಂಗ್ ಬೆಂಬಲಿಸಲಿದೆ. ಇದರಿಂದ 47 ನಿಮಿಷಗಳಲ್ಲಿ 100% ಚಾರ್ಜ್‌ ಮಾಡಬಹುದಾಗಿದೆ.

ಸದ್ಯ ರಿಯಲ್‌ ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ 24,999ರೂ., 8GB RAM + 128GB ಸ್ಟೋರೇಜ್ ಮಾದರಿಗೆ 25,999ರೂ. ಇದೆ. 8GB RAM + 256GB ಸ್ಟೋರೇಜ್ ಮಾಡೆಲ್ ಆಯ್ಕೆಯ ಬೆಲೆ 27,999ರೂ. ಆಗಿದೆ.

ರಿಯಲ್‌ ಮಿ 10 ಪ್ರೊ 5G ವಿಶೇಷತೆ :

  • ರಿಯಲ್‌ ಮಿ 10 ಪ್ರೊ 5G ಸ್ಮಾರ್ಟ್‌ಫೋನ್‌ 1,080x 2,400ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ.
  • ಇದರಲ್ಲಿ 120Hz ರಿಫ್ರೆಶ್ ರೇಟ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ನೀಡಲಾಗಿದ್ದು, ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
  • ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ.
  • ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್‌ ನೀಡಲಾಗಿದೆ.
  • ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್‌ ಅನ್ನು ಒಳಗೊಂಡಿದೆ.
  • ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
  • ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
  • ಇದು ಕೇವಲ 20 ನಿಮಿಷಗಳಲ್ಲಿ 50% ಚಾರ್ಜ್‌ ಮಾಡಬಹುದು ಎಂದು ಕಂಪನಿ ಹೇಳಿಕೊಂಡಿದೆ.

ಸದ್ಯ ರಿಯಲ್‌ ಮಿ 10ಪ್ರೊ 5G ಸ್ಮಾರ್ಟ್‌ಫೋನ್‌ ಕೂಡ ಎರಡು ಆಯ್ಕೆಯಲ್ಲಿದೆ. ಇದರ 6GB RAM + 128GB ಸ್ಟೋರೇಜ್ ಮಾದರಿಯ ಬೆಲೆ 18,999ರೂ. ಆಗಿದೆ. 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 19,999ರೂ. ನಿಗದಿ ಮಾಡಲಾಗಿದೆ.

ಸದ್ಯ ಈ ಮೇಲೆ ಬಿಡುಗಡೆಯದ ರಿಯಲ್‌ ಮಿ 10 ಪ್ರೊ+ 5G ಸ್ಮಾರ್ಟ್ ಫೋನನ್ನು ಜನಪ್ರಿಯ ಇ ಕಾಮರ್ಸ್‌ ತಾಣವಾದ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಮೂಲಕ ಖರೀದಿಸಿಬಹುದಾಗಿದೆ.

Leave A Reply

Your email address will not be published.