ಮಹಿಳೆಯರಿಗಾಗಿ ಹೊಸ ವರುಷಕ್ಕೆ ಹೊಸ ಯೋಜನೆ ರೂಪಿಸಿದ ರಾಜ್ಯ ಸರ್ಕಾರ!
ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಹೊಸವರ್ಷಕ್ಕೆ ಹೊಸತಾದ ಯೋಜನೆಯೊಂದನ್ನು ರೂಪಿಸಿದ್ದು, ಜನವರಿಯಲ್ಲಿ ಈ ಯೋಜನೆಗೆ ಚಾಲನೆ ನೀಡಲಿದೆ.
ಹೌದು. ರಾಜ್ಯದ ಮಹಿಳೆಯರಿಗೆ ಪ್ರತ್ಯೇಕ ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಿಂದ ರಾಜ್ಯಾದ್ಯಂತ ಆಯುಷ್ಮತಿ ಕ್ಲಿನಿಕ್ ಗಳಿಗೆ ಚಾಲನೆ ನೀಡಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ.
ಈ ಯೋಜನೆಗೆ ಆಯುಷ್ಮತಿ ಕ್ಲಿನಿಕ್ ನಲ್ಲಿ ಮಹಿಳೆಯರ ಆರೋಗ್ಯ ಸಮಸ್ಯೆ ಗುರುತಿಸಿ ಸೂಕ್ತಿ ಚಿಕಿತ್ಸೆ ನೀಡಲಾಗುತ್ತದೆ. ಇದು ಕೇವಲ ಮಹಿಳೆಯರಿಗಾಗಿಯೇ ಮೀಸಲಾದ ಕ್ಲಿನಿಕ್ ಗಳು, ಇಲ್ಲಿ ನುರಿತ ಸ್ತ್ರೀರೋಗ ತಜ್ಞರು ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಹಾಗೂ ಆರೋಗ್ಯ ಸೇವೆಗಳನ್ನು ನೀಡಲಿದ್ದಾರೆ ಎಂದು ಹೇಳಿದ್ದಾರೆ. ಹೀಗಾಗಿ ಮಹಿಳೆಯರಿಗೆ ಪ್ರತ್ಯೇಕ ವೈದ್ಯಕೀಯ ಸೇವೆ ಒದಗಿಸಲುರಾಜ್ಯಾದ್ಯಮತ 250 ಆಯುಷ್ಮತಿ ಕ್ಲಿನಿಕ್ ಗಳಿಗೆ ಜನವರಿಯಲ್ಲಿ ಚಾಲನೆ ನೀಡಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.