ESIC : ನೌಕರರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ | ನೇರ ಸಂದರ್ಶನಕ್ಕೆ ಆಹ್ವಾನ | ಮಾಸಿಕ ಸಂಬಳ ರೂ.68,000
ESIC Karnataka Recruitment 2022: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ(Employees State Insurance Corporation Karnataka) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ (Bengaluru) ಕೆಲಸ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇದೇ ಡಿಸೆಂಬರ್ 27, 2022 ರಂದು ಸಂದರ್ಶನ(Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 14/12/2022
ಸಂದರ್ಶನ ನಡೆಯುವ ದಿನಾಂಕ: 27/12/2022
ಸಂಸ್ಥೆ : ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ
ಹುದ್ದೆ : ಸೀನಿಯರ್ ರೆಸಿಡೆಂಟ್, ಟ್ಯೂಟರ್ಸ್
ಒಟ್ಟು ಹುದ್ದೆ: 3
ವೇತನ ಮಾಸಿಕ : ₹ 67,700
ಉದ್ಯೋಗದ ಸ್ಥಳ : ಬೆಂಗಳೂರು
ಹುದ್ದೆಯ ವಿವರ : ಅನಾಟಮಿ- 2 ಹುದ್ದೆ
ಫಾರೆನ್ಸಿಕ್ ಮೆಡಿಸಿನ್- 1 ಹುದ್ದೆ
ಶೈಕ್ಷಣಿಕ ಅರ್ಹತೆ:
ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಡಿ, ಡಿಎನ್ಬಿ, ಎಂಎಸ್ಸಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವೇತನ: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 67,700 ರೂ. ವೇತನ ನೀಡಲಾಗುತ್ತದೆ.
ವಯೋಮಿತಿ: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 27, 2022ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನ ನಡೆಯುವ ಸ್ಥಳ : ಅಕಾಡೆಮಿಕ್ ಬ್ಲಾಕ್, ESIC PGIMSR, ರಾಜಾಜಿನಗರ, ಬೆಂಗಳೂರು- 560010