NPS : ಹೊಸ ಪಿಂಚಣಿ ವ್ಯವಸ್ಥೆ ಕುರಿತು ಇಲ್ಲಿದೆ ಸರಕಾರಿ ನೌಕರರ ಸಂಘದ ಅಧ್ಯಕ್ಷರಿಂದ ಮಹತ್ವದ ಹೇಳಿಕೆ

ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದೆ.ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ.

 

ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂಬ ಕೂಗು ಎಲ್ಲೆಡೆ ಅನೇಕ. ದಿನಗಳಿಂದ ಕೇಳಿ ಬರುತ್ತಿದ್ದು, ಈ ಕುರಿತಂತೆ ಎನ್‌.ಪಿ.ಎಸ್. ನೌಕರ ಸಂಘದ ವತಿಯಿಂದ ‘ಮಾಡು ಇಲ್ಲವೇ ಮಡಿ’ ಹೋರಾಟವನ್ನು ಹಮ್ಮಿಕೊಳ್ಳಲು ಮುಂದಾಗಿದ್ದಾರೆ.

ಹೊಸ ಪಿಂಚಣಿ ವ್ಯವಸ್ಥೆ ಜಾರಿಯಾಗಿರುವ ಕಾರಣ ಸರ್ಕಾರಿ ನೌಕರರಿಗೆ ನಿವೃತ್ತಿ ಬಳಿಕ ಯಾವುದೇ ಭದ್ರತೆ ಇಲ್ಲದಂತಾಗಿದ್ದು, ಹೀಗಾಗಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮರು ಜಾರಿಗೊಳಿಸಬೇಕು ಎಂದು ಈ ಹೋರಾಟ ನಡೆದಿದ್ದು, ಇದರ ಮಧ್ಯೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗೆ ನಡೆದ ಬೆಂಗಳೂರು ನಗರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸಂದರ್ಭದಲ್ಲಿ ಈ ಕುರಿತು ಮಾತನಾಡಿದ ಅವರು, ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ರದ್ದುಗೊಳಿಸಲು ಆಗ್ರಹಿಸಿ ಏಪ್ರಿಲ್ ನಿಂದ ನಿರ್ಣಾಯಕ ಹೋರಾಟ ರೂಪಿಸಲಾಗುವ ಕುರಿತು ಮಾಹಿತಿ ನೀಡಿದ್ದಾರೆ.


ಇದರ ಜೊತೆಗೆ ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣಿಗಾಗಿ ರಚಿಸಲಾಗಿರುವ 7ನೇ ವೇತನ ಆಯೋಗದ ಸವಲತ್ತುಗಳನ್ನು ಗರಿಷ್ಠ ಮಟ್ಟದಲ್ಲಿ ಪಡೆಯಲು ಆದ್ಯತೆ ನೀಡಲಾಗಿದೆ. ಮುಂಬರುವ ಮಾರ್ಚ್ ಅಂತ್ಯದ ವೇಳೆಗೆ ವರದಿ ಅನುಷ್ಠಾನಕ್ಕೆ ಮನವಿ ಮಾಡಲಾಗಿದ್ದು, ಶೇಕಡ 40ರಷ್ಟು ವೇತನ ಹೆಚ್ಚಳವಾಗುವ ನಿರೀಕ್ಷೆ ಇದೆ ಎಂಬ ಮಾಹಿತಿ ಕೂಡ ನೀಡಿದ್ದಾರೆ.

Leave A Reply

Your email address will not be published.