SSLC ವಿದ್ಯಾರ್ಥಿಗಳಿಗೆ ಸಿಗಲಿದೆ 10 ಸಾವಿರ ಪ್ರೋತ್ಸಾಹ ಧನ | ಈ ಹೊಸ ಯೋಜನೆಯ ಲಾಭ ಪಡೆಯಿರಿ
ಶಿಕ್ಷಣಕ್ಕೆ ಉತ್ತೇಜನ ನೀಡಲೆಂದು ಸರಕಾರ ಹಲವಾರು ಯೋಜನೆಗಳನ್ನು ತರುತ್ತಿದೆ. ಒಂದು ಒಂದು ಯೋಜನೆ ಈಗ ಶಿಕ್ಷಣವನ್ನು ಉತ್ತೇಜಿಸಲು ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಮುಖ್ಯಮಂತ್ರಿ ಬಾಲಕ್ ಬಾಲಿಕಾ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿಯಲ್ಲಿ ಸರ್ಕಾರವು 10 ಸಾವಿರ ರೂ. ನೀಡಲಿದೆ. ಅಂದ ಹಾಗೆ ಇದು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗಲಿದೆ. ಈ ಯೋಜನೆಯ ಲಾಭ ಪಡೆಯಬೇಕಾದರೆ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರಬೇಕು.
ಅಲ್ಲದೇ, ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರೆ, ಸರ್ಕಾರವು ಆ ವಿದ್ಯಾರ್ಥಿಗಳಿಗೆ 8 ಸಾವಿರ ರೂಪಾಯಿ ಹಣ ನೀಡಲಿದೆ. ನೀವೂ ಸಹ ಈ ಯೋಜನೆಯ ಲಾಭ ಪಡೆಯಲು ಬಯಸಿದರೆ, ಯಾವುದೇ ಕಚೇರಿ ಅಥವಾ ಶಾಲೆಗೆ ಹೋಗದೇ ಮನೆಯಲ್ಲೇ ಕೂತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಮುಖ್ಯಮಂತ್ರಿ ಬಾಲಕ್ ಬಾಲಿಕಾ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಬಿಹಾರ ಶಿಕ್ಷಣ ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಬೇಕು. ಬಳಿಕ ಮುಖಪುಟದಲ್ಲಿ ಕಾಣುವ ನೊಂದಣಿ ಆಯ್ಕೆಯನ್ನು ಕ್ಲಿಕ್ ಮಾಡಿ. ಲಾಗಿನ್ ಆದ ಬಳಿಕ ನೀವು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಈ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಕೆಲವು ದಾಖಲೆಗಳನ್ನು ಸಲ್ಲಿಸಬೇಕು. ಅದ್ಯಾವುದೆಂದರೆ, ಶಿಕ್ಷಣ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಮನೆ ವಿಳಾಸ, ಬ್ಯಾಂಕ್ ಖಾತೆ ವಿವರಗಳು, ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಇತರ ದಾಖಲೆಗಳನ್ನು ನೀಡಬೇಕು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಬಿಹಾರ ರಾಜ್ಯದ ನಿವಾಸಿಯಾಗಿರಬೇಕು. ವಿದ್ಯಾರ್ಥಿಯು ಉತ್ತರ ಪ್ರದೇಶ ಅಥವಾ ಬೇರೆ ಯಾವುದೇ ರಾಜ್ಯದವರಾಗಿದ್ದು, ಬಿಹಾರದಲ್ಲಿ ಓದುತ್ತಿದ್ದರೆ, ಆ ವಿದ್ಯಾರ್ಥಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ. ಅಲ್ಲದೇ ಅರ್ಜಿದಾರರು ಮದುವೆಯಾಗಿರಬಾರದು ಎಂಬ ಷರತ್ತನ್ನೂ ಸರ್ಕಾರ ವಿಧಿಸಿದೆ.
ನೊಂದಣಿಯಾದ ಬಳಿಕ ನೀವು ಪ್ರೋತ್ಸಾಹಧನವನ್ನು ಪಡೆಯಲು ಅರ್ಹರಿದ್ದೀರಿ ಎಂದು ಅಧಿಕಾರಿಗಳು ಹೇಳುತ್ತಾರೆ. ಎಲ್ಲಾ ವಿವರಗಳನ್ನು ನೀಡಿದ ಬಳಿಕ 10,000 ಪ್ರೋತ್ಸಾಹಧನ ನಿಮಗೆ ದೊರೆಯುತ್ತದೆ.