ಮಂಗಳೂರು : ಅಪ್ರಾಪ್ತ ಬಾಲಕಿಗೆ ಕಿರುಕುಳ | ಆರೋಪಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿತ |

ಮಂಗಳೂರು: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಹಿಡಿದು ಥಳಿಸಿದ ಘಟನೆಯೊಂದು ನಗರದಲ್ಲಿ ನಡೆದಿದೆ. ಬೈಕ್‌ನಲ್ಲಿ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಬಾಲಕಿಯ ತಂದೆ ಮತ್ತು ಸ್ನೇಹಿತರು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂದು ದೂರಲಾಗಿದೆ.

ಮುಲ್ಕಿಯ ಗ್ರಾಮವೊಂದರಲ್ಲಿ ಶನಿವಾರ ಈ ಘಟನೆ ನಡೆದಿದೆ. ಡಿಸೆಂಬರ್ 13ರಂದು ಆರೋಪಿಯು ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಎಂದು ಹೇಳಲಾಗಿದೆ.

ಈ ವಿಚಾರ ತಿಳಿದು ಬಾಲಕಿಯ ತಂದೆ ಮತ್ತು ಸ್ನೇಹಿತರಿಬ್ಬರು ಆರೋಪಿಯನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಶನಿವಾರವೂ ಸಹ ಮತ್ತೆ ಬಾಲಕಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾನೆ. ಇದನ್ನು ಕಂಡು ಆಕೆಯ ತಂದೆ ಮತ್ತು ಸ್ನೇಹಿತರು ಆತನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.

ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಪೋಕ್ಸ್ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ದೂರಿನ ಮೇರೆಗೆ ಹಲ್ಲೆ ನಡೆಸಿದವರ ವಿರುದ್ಧವೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.