ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಜ.17ರಂದು ನೇರ ಸಂದರ್ಶನ | ಮಾಸಿಕ ವೇತನ ರೂ.30,000
IIAP Recruitment 2023: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ (Indian Institute of Astrophysics) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಯಲ್ಲಿ ಆಯ್ಕೆಯಾದವರಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಜನವರಿ 17, 2023ರಂದು ರಂದು ಸಂದರ್ಶನ ನಡೆಯಲಿದೆ.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 16/12/2022
ಸಂದರ್ಶನ ನಡೆಯುವ ದಿನಾಂಕ: 17/01/2023
ಸಂಸ್ಥೆ : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್
ಹುದ್ದೆ: ಎಂಜಿನಿಯರ್ ಟ್ರೈನಿ
ಒಟ್ಟು ಹುದ್ದೆ : 2
ವೇತನ ಮಾಸಿಕ : 30,000
ಉದ್ಯೋಗದ ಸ್ಥಳ : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತೆ.
ಜನವರಿ 17, 2023ರಂದು ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಬೆಳಗ್ಗೆ 9 ಗಂಟೆಗೆ ಸ್ಥಳದಲ್ಲಿ ಹಾಜರಿರಬೇಕು. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ, ಪಾಸ್ಪೋರ್ಟ್ ಅಳತೆಯ ಫೋಟೋ, ಎಲ್ಲಾ ದಾಖಲಾತಿಗಳ ಮೂಲ ಪ್ರತಿಗಳು, ಶೈಕ್ಷಣಿಕ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ ಹಾಗೂ ಇತರೆ ದಾಖಲಾತಿಗಳನ್ನು ತಂದಿರಬೇಕು.
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CSE/IT/ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ ಇಂಜಿನಿಯರಿಂಗ್‌ನಲ್ಲಿ ಶೇ.60ರಷ್ಟು ಅಂಕಗಳೊಂದಿಗೆ B.E/ B.Tech ಉತ್ತೀರ್ಣರಾಗಿರಬೇಕು. ಅಥವಾ ಶೇ.60 ರಷ್ಟು ಅಂಕಗಳೊಂದಿಗೆ ಬಿಸಿಎ, ಎಂಸಿಎ, ಎಂಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಜನವರಿ 17, 2023ಕ್ಕೆ ಗರಿಷ್ಠ 26 ವರ್ಷ ಮೀರಿರಬಾರದು.
ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30,000 ವೇತನ ನೀಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ:
ಇನ್ಸ್ಟಿಟ್ಯೂಟ್ ಕ್ಯಾಂಪಸ್
2ನೇ ಬ್ಲಾಕ್
ಕೋರಮಂಗಲ
ಸರ್ಜಾಪುರ ರಸ್ತೆ
ಬೆಂಗಳೂರು-560034