Ministery Affairs Recruitment 2023 | ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದಲ್ಲಿ ಉದ್ಯೋಗ | ಅರ್ಜಿ ಸಲ್ಲಿಸಲು ಕೊನೆ ದಿನ :ಜ.6

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ
ಹುದ್ದೆ : ಕನ್ಸಲ್ಟೆಂಟ್
ವಿದ್ಯಾರ್ಹತೆ : ಪದವಿ
ವೇತನ ತಿಂಗಳಿಗೆ : 60,000
ಅರ್ಜಿ ಸಲ್ಲಿಸಲು ಕೊನೆ ದಿನ : 06/01/2023
ಉದ್ಯೋಗದ ಸ್ಥಳ : ಭಾರತ

ವಯೋಮಿತಿ:
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು.

ಅರ್ಹತೆ:
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ 2-3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. 4 ವರ್ಷ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ವೇತನ:
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 60,000 ವೇತನ ನೀಡಲಾಗುತ್ತದೆ.

ಅವಧಿ:
ಅಭ್ಯರ್ಥಿಗಳನ್ನು ಆರಂಭದಲ್ಲಿ 1 ವರ್ಷದ ಅವಧಿಗೆ ನೇಮಿಸಿಕೊಳ್ಳಲಾಗುತ್ತದೆ. ಬಳಿಕ ಕೆಲಸದ ಅಗತ್ಯತೆ ಹಾಗೂ ಕೌಶಲ್ಯಗಳ ಆಧಾರದ ಮೇಲೆ ಅವಧಿಯನ್ನು ವಿಸ್ತರಿಸಬಹುದು.

ಸಚಿವಾಲಯದ ಅಧಿಕೃತ ವೆಬ್​ಸೈಟ್​ನಲ್ಲಿಯೇ ಅರ್ಜಿ ನಮೂನೆ ದೊರೆಯಲಿದ್ದು, ಅಭ್ಯರ್ಥಿಗಳು ಆನ್​ಲೈನ್ ಮೂಲಕ ಮಾತ್ರ ಅರ್ಜಿ ಹಾಕಬೇಕು. ಈ ಗಡುವಿನ ಯಾವುದೇ ಬದಲಾವಣೆಯನ್ನು ನೋಟಿಸ್ ಮೂಲಕ ಅಭ್ಯರ್ಥಿಗಳಿಗೆ ತಿಳಿಸಲಾಗುತ್ತದೆ. ಅಭ್ಯರ್ಥಿಗಳು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಬಹುದು.

Leave A Reply

Your email address will not be published.